Wednesday, July 3, 2024
Homeಕರಾವಳಿಮಂಗಳೂರುಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ವಿರುದ್ದ ದಾಖಲಾದ ಎರಡು ಪ್ರಕರಣಗಳ ಚಾರ್ಜ್ ಶೀಟ್ ಕೋರ್ಟ್ ಗೆ...

ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ವಿರುದ್ದ ದಾಖಲಾದ ಎರಡು ಪ್ರಕರಣಗಳ ಚಾರ್ಜ್ ಶೀಟ್ ಕೋರ್ಟ್ ಗೆ ಸಲ್ಲಿಕೆ

spot_img
- Advertisement -
- Advertisement -

ಬೆಳ್ತಂಗಡಿ; ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬೆಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿದ್ದನ್ನು ವಿರೋಧಿಸಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರ ವಿರುದ್ಧವೇ ಗುಡುಗಿದ್ದ ಶಾಸಕ ಹರೀಶ್ ರ ವಿರುದ್ಧ ದಾಖಲಾಗಿದ್ದ ಹಾಗೂ ಅನುಮತಿ ಇಲ್ಲದೆ ಪ್ರತಿಭಟನೆ ಮಾಡಿದ ಎರಡೂ ಪ್ರಕರಣಗಳ ತ್ವರಿತ ತನಿಖೆ ನಡೆಸಿದ ಪೊಲೀಸರು ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೇ.28(ಇಂದು) ರಂದು ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್ ) ಸಲ್ಲಿಸಿದ್ದಾರೆ.

ಪ್ರಕರಣದ ತನಿಖೆಗಾಗಿ ಎಸ್.ಪಿ ಅವರಿಂದ ನಿಯೋಜಿಸಲ್ಪಟ್ಟಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ಪುತ್ತೂರು ಪೊಲೀಸ್ ಇನ್ಸ್‌ಪೆಕ್ಟರ್ ಸತೀಶ್ ಜಿ.ಜೆ‌ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಈ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಆದ್ದರಿಂದ ಪ್ರಕರಣದ ಮುಂದಿನ ವಿಚಾರಣೆಯನ್ನು ನಡೆಸಲಿದೆ.

ಇನ್ನು ಕಳೆಂಜ ಗಲಾಟೆ ಪ್ರಕರಣದ ಒಂದು ಚಾರ್ಜ್ ಶೀಟ್ ಸಲ್ಲಿಸಲು ಧರ್ಮಸ್ಥಳ ಪೊಲೀಸರು ತಯಾರಿ ನಡೆಸುತ್ತಿದ್ದಾರೆ. ಒಟ್ಟು 8 ಪ್ರಕರಣಗಳು ಪೂಂಜ ಮೇಲಿದ್ದು ಕಳೆಂಬ ಹಾಗೂ ಬೆಳ್ತಂಗಡಿಯಲ್ಲಿ ಮೊನ್ನೆ ನಡೆದ ಎರಡು ಘಟನೆಗಳಿಗೆ ಸಂಬಂಧಿಸಿದ ಕೇಸ್ ಗಳಲ್ಲಿ ಜಾಮೀನು ಸಿಕ್ಕಿಲ್ಲ,

- Advertisement -
spot_img

Latest News

error: Content is protected !!