- Advertisement -
![]()
- Advertisement -
ಮಂಗಳೂರು: “ಚಾರ್ಲಿ 777” ಸಿನಿಮಾದ ನಿರ್ದೇಶಕ ಕಿರಣ್ ರಾಜ್ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಭಾನುವಾರ ಕಾಸರಗೋಡು ಮೂಲದ ಅನಯ ವಸುಧಾ ಅವರೊಂದಿಗೆ ಕಿರಣ್ ರಾಜ್ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ.
ಮಂಗಳೂರಿನ ದಿ ಓಶಿಯನ್ ಪರ್ಲ್ ಹೋಟೆಲ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಕುಟುಂಬ ಸದಸ್ಯರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಕಿರಣ್ ರಾಜ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಕಿರಣ್ ಮಂಗಳೂರು ಗಡಿಭಾಗ ಕಾಸರಗೋಡು ಮೂಲದವರಾಗಿದ್ದು ಅನಯ ಕೂಡ ಕಾಸರಗೋಡು ಮೂಲದವರಾಗಿದ್ದಾರೆ. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ಸಿನಿಮಾವನ್ನು ಕಿರಣ್ ರಾಜ್ ನಿರ್ದೇಶನ ಮಾಡಿ ಸಿನಿಮಾದಲ್ಲಿ ಚಿಕ್ಕ ಪಾತ್ರವೊಂದರಲ್ಲಿ ಅಭಿನಯಿಸಿದ್ದರು.
- Advertisement -


