Wednesday, April 24, 2024
Homeತಾಜಾ ಸುದ್ದಿ21 ಸಿಟಿಗಳಲ್ಲಿ ಪ್ರೀಮಿಯರ್ ಆಗುತ್ತಿದೆ ರಕ್ಷಿತ್ ಶೆಟ್ಟಿ ನಟನೆಯ ‘ಚಾರ್ಲಿ 777’  ಸಿನಿಮಾ

21 ಸಿಟಿಗಳಲ್ಲಿ ಪ್ರೀಮಿಯರ್ ಆಗುತ್ತಿದೆ ರಕ್ಷಿತ್ ಶೆಟ್ಟಿ ನಟನೆಯ ‘ಚಾರ್ಲಿ 777’  ಸಿನಿಮಾ

spot_img
- Advertisement -
- Advertisement -

‘ಚಾರ್ಲಿ 777’ ಸಿನಿಮಾ ಇದೇ ತಿಂಗಳ‌ 10ರಂದು ವರ್ಲ್ಡ್ ವೈಡ್ ರಿಲೀಸ್ ಆಗುತ್ತಿದೆ.  ನಾಯಿ ಮತ್ತು ಮನುಷ್ಯನ ಬಾಂಧವ್ಯ ಹೊತ್ತ ಈ ಕಥೆಯ ಸಿನಿಮಾಕ್ಕೆ ರಕ್ಷಿತ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಸಿನಿಮಾವು ಜೂನ್ 10ರಂದು ತೆರೆಗೆ ಬರ್ತಿರೋದ್ರಿಂದ ಚಿತ್ರತಂಡ ಭರ್ಜರಿ ಪ್ರಮೋಷನ್ ಮಾಡ್ತಿದೆ. ರಾಜ್ಯ ರಾಜ್ಯ ಸುತ್ತಿ ಪ್ರಚಾರದ ಕಹಳೆಯನ್ನು ಮೊಳಗಿಸಿ ಬರೋಬ್ಬರಿ‌ 21 ಸಿಟಿಗಳಲ್ಲಿ ಚಾರ್ಲಿ ಸಿನಿಮಾ ಪ್ರೀಮಿಯರ್ ಆಗುತ್ತಿದೆ.  

21 ಸಿಟಿಗಳಲ್ಲಿ ಪ್ರೀಮಿಯರ್ ಆಗ್ತಿರುವ ಚಾರ್ಲಿ-777 ಸಿನಿಮಾ ಹೈದ್ರಾಬಾದ್, ವಾರಾಣಾಸಿ 7ರಂದು, ದೆಹಲಿಯಲ್ಲಿ 2ರಂದು, ಅಮೃತಸರ 2ರಂದು, ಮಧುರೈ, ಪಂಜಿಮ್, ಬರೋಡಾ, ವೈಜಾಕ್ ನಲ್ಲಿ 8ರಂದು, ಕೊಯ್ಯಮತ್ತೂರು, ಸೊಲ್ಲಾಪುರ, ತಿರುವನಂತಪುರ, ಅಹಮದಾಬಾದ್ ನಲ್ಲಿ 7ರಂದು, ಪುಣೆ, ಮುಂಬೈ, ಕಿಚ್ಚಿನ್, ಲಖನೌ, ಚೆನ್ನೈ, ಜೈಪುರ, ಕೋಲ್ಕತ್ 6ರಂದು, ನಾಗಾಪುರ, ಸೂರತ್ ನಲ್ಲಿ 9ರಂದು ಪ್ರೀಮಿಯರ್ ಆಗುತ್ತಿದ್ದು, ಈಗಾಗಲೇ ಆಲ್ ಮೋಸ್ಟ್ ಆಲ್  ಟಿಕೆಟ್ ಸೋಲ್ಟ್ ಔಟ್ ಆಗಿವೆ ಎಂದು ತಿಳಿದು ಬಂದಿದೆ.

 ಪರಂವಃ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಚಾರ್ಲಿ 777 ಸಿನಿಮಾದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಧರ್ಮ ಪಾತ್ರದಲ್ಲಿ ಮಿಂಚಿದ್ದಾರೆ. ರಕ್ಷಿತ್ ಗೆ ಜೋಡಿಯಾಗಿ ಸಂಗೀತ ಶೃಂಗೇರಿ ನಟಿಸಿದ್ದಾರೆ. ನಟನೆ ಜೊತೆಗೆ ರಕ್ಷಿತ್ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದು, ರಕ್ಷಿತ್ ಜತೆಗೆ ರಾಜ್‌ ಬಿ. ಶೆಟ್ಟಿ, ದಾನಿಶ್‌ ಸೇಠ್‌, ತಮಿಳಿನ ಬಾಬಿ ಸಿಂಹ ಸೇರಿ ಇನ್ನೂ ಅನೇಕರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಿರಣ್‌ ರಾಜ್‌ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು,  ಇದು ಇವರ ಚೊಚ್ಚಲ ಸಿನಿಮಾವಾಗಿದೆ.

- Advertisement -
spot_img

Latest News

error: Content is protected !!