Thursday, August 20, 2026
Homeಅಪರಾಧಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಬೈಕ್ ಪಲ್ಟಿ ,ಮೂವರಿಗೆ ಗಂಭೀರ ಗಾಯ

ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಬೈಕ್ ಪಲ್ಟಿ ,ಮೂವರಿಗೆ ಗಂಭೀರ ಗಾಯ

- Advertisement -
- Advertisement -

ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಮೂವರಿಗೆ ಗಂಭೀರ ಗಾಯವಾದ ಘಟನೆ ಡಿ.7 ರಂದು ರಾತ್ರಿ ನಡೆದಿದೆ.

ಬುಧವಾರ ರಾತ್ರಿ ಸುಮಾರು 10:30ರ ವೇಳೆಗೆ ಈ ಘಟನೆ ಸಂಭವಿಸಿದ್ದು, ಬೈಕ್ 7 ನೇ ತಿರುವಿನಿಂದ 6 ನೇ ತಿರುವಿಗೆ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಮೂವರಿಗೂ ಗಂಭೀರ ಗಾಯಗಳಾಗಿದ್ದು, ಗಾಯಗೊಂಡವರು ಬಳ್ಳಾರಿ ಜಿಲ್ಲೆಯ ಸಂಡೂರು ನಿವಾಸಿಗಳಾದ ಯುವರಾಜ್(20), ಆನಂದ ಬಾಬು(29), ಅನಿಲ್ ಕುಮಾರ್(28) ತಿಳಿದು ಬಂದಿದೆ. ಧರ್ಮಸ್ಥಳ ಬಳಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು ಮೂವರು ಊರಿಂದ ವಾಪಾಸ್ ಒಂದೇ ಬೈಕ್ ನಲ್ಲಿ ಟ್ರೀಬಲ್ ರೈಡ್ ಮಾಡಿಕೊಂಡು ಬರುತ್ತಿರುವಾಗ ಈ ಘಟನೆ ಸಂಭವಿಸಿದೆ.

ಗಾಯಾಳುಗಳಿಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!