Thursday, June 4, 2026
Homeಕರಾವಳಿಚಾರ್ಮಾಡಿ ಘಾಟ್: ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಜಲಪಾತದತ್ತ ಪಲ್ಟಿ

ಚಾರ್ಮಾಡಿ ಘಾಟ್: ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಜಲಪಾತದತ್ತ ಪಲ್ಟಿ

- Advertisement -
- Advertisement -

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಸೋಮನಕಾಡು ಬಳಿ ಇಂದು ನಡೆದಿದೆ,

ದಾವಣಗೆರೆ ಮೂಲದ ಐದು ಮಂದಿ ಕಾರಿನಲ್ಲಿ ಧರ್ಮಸ್ಥಳ ಕಡೆ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಜು ಕವಿದ ಹಿನ್ನೆಲೆಯಲ್ಲಿ ದಾರಿ ಕಾಣದೆ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳೀಯರು ಆಗಮಿಸಿದ ಹಿಟಾಚಿ ಸಹಾಯದಿಂದ ಕಾರನ್ನು ಮೇಲಕ್ಕೆತ್ತಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

- Advertisement -

Latest News

error: Content is protected !!