Sunday, August 30, 2026
Homeಕರಾವಳಿಮಂಗಳೂರುಮಂಗಳೂರು; ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ವಂಚನೆ

ಮಂಗಳೂರು; ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ವಂಚನೆ

- Advertisement -
- Advertisement -

ಮಂಗಳೂರು; ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ವಂಚಿಸಿರುವ ಬಗ್ಗೆ ಮಂಗಳೂರಿನ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿಯೊಬ್ಬರಿಗೆ ಅಕ್ಟೋಬ್ 7ರಂದು ಮಧ್ಯಾಹ್ನ ಕರೆ ಮಾಡಿದ ಅಪರಿಚಿತ ವ್ಯಕ್ತಿ ನಿಮ್ಮ ಹೆಸರಿನಲ್ಲಿ ಎರಡು ಸಿಮ್ ಇದೆ. ನಿಮ್ಮ ವಿರುದ್ಧ ದೂರು ಇದ್ದು, ಮುಂಬೈಯ ಎಗ್ರಿಪಾಡ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ತನಗೆ ಅಸಾಧ್ಯ ಎಂದಾಗ ಬೇರೆ ಬೇರೆ ರೂಪದಲ್ಲಿ ಬೇರೆ ಬೇರೆ ಮಂದಿ ಮಾತನಾಡಿ ಸಿಬಿಐ ಅಧಿಕಾರಿ ಎಂದು ನಂಬಿಸಿ ಹಂತ ಹಂತವಾಗಿ 31,12,000 ರೂ. ವನ್ನು ವಿವಿಧ ಬ್ಯಾಂಕ್‌ ಖಾತೆಗೆ ವರ್ಗಾಯಿಸಿ ಮೋಸ ಮಾಡಿದ್ದಾರೆ. ಆರೋಪಿಗಳಾದ ಸಂದೀಪ್ ರಾವ್, ಸಂಜನಾ, ನವೋಜೋತ್ ಸಿಮಿ ಎಂಬವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರರು ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!