Wednesday, June 24, 2026
Homeತಾಜಾ ಸುದ್ದಿನಟಿ ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ವಿರುದ್ಧ ಮತ್ತೆ FIR ದಾಖಲು

ನಟಿ ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ವಿರುದ್ಧ ಮತ್ತೆ FIR ದಾಖಲು

- Advertisement -
- Advertisement -

ಮುಂಬೈ: ಇತ್ತೀಚೆಗಷ್ಟೇ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ರಾಜ್ ಕುಂದ್ರಾಗೆ ಈಗ ಮತ್ತೊಂದು ಆಘಾತ ಎದುರಾಗಿದೆ. ರಾಜ್ ಕುಂದ್ರಾ ಮತ್ತು ಪತ್ನಿ, ನಟಿ ಶಿಲ್ಪಾ ಶೆಟ್ಟಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.

ಉದ್ಯಮವೊಂದರಲ್ಲಿ ತೊಡಗಿಸಿಕೊಳ್ಳಲು ಸಲಹೆ ನೀಡಿದ್ದ ರಾಜ್ ಕುಂದ್ರಾ ದಂಪತಿ ತಮಗೆ SFL ಫಿಟ್ ನೆಸ್ ಕಂಪನಿಯಲ್ಲಿ 1.5 ಕೋಟಿ ರೂ. ಹೂಡಿಕೆ ಮಾಡಿಸಿ ವಂಚಿಸಿದ್ದಾರೆ ಎಂದು ಮುಂಬೈ ಉದ್ಯಮಿ ನಿತಿನ್ ಬುರಾರಿ ಮುಂಬೈ ಬಾಂದ್ರಾ ಪೊಲೀಸರಿಗೆ ದೂರು ನೀಡಿದ್ದಾರೆ.

ನಟಿ ಶಿಲ್ಪಾಶೆಟ್ಟಿ ಪ್ರತಿಕ್ರಿಯೆ ಹೀಗಿದೆ..
ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಮತ್ತು ಪತಿ ರಾಜ್ ಕುಂದ್ರಾ ವಿರುದ್ಧ ಎಫ್‌ಐಆರ್ ದಾಖಲಿಸಿದ ಬಗ್ಗೆ ಶಿಲ್ಪಾ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, SFL ಕಂಪನಿಯಲ್ಲಿ ನನ್ನದು ಯಾವುದೇ ಪಾತ್ರವಿಲ್ಲ. ನನಗೂ ಕಂಪನಿ ವ್ಯವಹಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎಲ್ಲಾ ವ್ಯವಹಾರಗಳನ್ನು ಕಾಶಿಫ್ ಖಾನ್ ನೋಡಿಕೊಳ್ಳುತ್ತಿದ್ದ. SFL ಕಂಪನಿ ಮಾಲೀಕ ಕಾಶಿಫ್ ಖಾನ್ ಆಗಿದ್ದು, ನನಗೂ ಕಂಪನಿ ವ್ಯವಹಾರಕ್ಕೆ ಯಾವುದೇ ಸಂಬಂಧವಿಲ್ಲ. ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಕಂಡು ಅಚ್ಚರಿಯಾಗಿದೆ ಎಂದು ಶಿಲ್ಪಾ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -

Latest News

error: Content is protected !!