Sunday, June 7, 2026
Homeಪ್ರಮುಖ-ಸುದ್ದಿನಟ ಚಿರಂಜೀವಿ ಸರ್ಜಾ ನಿಧನಕ್ಕೆ ಮುಖ್ಯಮತ್ರಿ ಯಡಿಯೂರಪ್ಪ ಸಂತಾಪ

ನಟ ಚಿರಂಜೀವಿ ಸರ್ಜಾ ನಿಧನಕ್ಕೆ ಮುಖ್ಯಮತ್ರಿ ಯಡಿಯೂರಪ್ಪ ಸಂತಾಪ

- Advertisement -
- Advertisement -

ಬೆಂಗಳೂರು: ಯುವ, ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಹಲವಾರು ಜನಪ್ರಿಯ ಹಾಗೂ ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿರುವ ಅವರು, ಇನ್ನೂ ಪ್ರವರ್ಧಮಾನಕ್ಕೆ ಬರಬೇಕಿದ್ದ, ಉಜ್ವಲ ಭವಿಷ್ಯವನ್ನು ಹೊಂದಿದ್ದ ಕಲಾವಿದ. ಅವರ ನಿಧನದಿಂದ ಕನ್ನಡ ಚಲನಚಿತ್ರ ರಂಗ ಓರ್ವ ಉತ್ತಮ ನಟನನ್ನು ಕಳೆದುಕೊಂಡಂತಾಗಿದೆ ಎಂದು ಹೇಳಿದ್ದಾರೆ.

ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!