Friday, June 5, 2026
Homeಕರಾವಳಿಮುಲ್ಕಿ: ಸಾಕು ನಾಯಿ ಮೇಲೆ ಚಿರತೆ ದಾಳಿ, ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಮುಲ್ಕಿ: ಸಾಕು ನಾಯಿ ಮೇಲೆ ಚಿರತೆ ದಾಳಿ, ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

- Advertisement -
- Advertisement -

ಮುಲ್ಕಿ: ಈಗೀಗ ಕಾಡು ಪ್ರಾಣಿಗಳು ಅಲ್ಲಲ್ಲಿ ಪ್ರತ್ಯಕ್ಷವಾಗುವುದು ಸರ್ವೇ ಸಾಮಾನ್ಯ ಎಂಬಂತಾಗಿದ್ದು, ಮುಲ್ಕಿಯ ಬಳಕುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಲೂರುಪದವಿನಲ್ಲಿ ಮನೆಯಲ್ಲಿ ಕಟ್ಟಿ ಹಾಕಿದ್ದ ನಾಯಿಯ ಮೇಲೆ ಚಿರತೆ ದಾಳಿ ಮಾಡಿದೆ.

ಕೊಲ್ಲೂರುಪದವು ಸಮೀಪದ ಸುವರ್ಣಸಿರಿಯ ಕುಟ್ಟಿ ಪೂಜಾರಿ ಎಂಬವರ ಮನೆಯ ನಾಯಿಯ ಮೇಲೆ ಚಿರತೆ ದಾಳಿ ಮಾಡಿದೆ. ಇಂದು ಬೆಳಗ್ಗಿನ ಜಾವ 4 ಗಂಟೆ ವೇಳೆಗೆ ನಾಯಿ ಅರಚಾಡುವುದನ್ನು ಕೇಳಿದ ಮನೆ ಮಂದಿ ಎಚ್ಚರಗೊಂಡು ನೋಡಿದಾಗ ಚಿರತೆ ನಾಯಿಯನ್ನು ಬಿಟ್ಟು ಕಾಲ್ಕಿತ್ತಿದೆ. ಮನೆಯವರು ಎಚ್ಚರಗೊಂಡಿದ್ದರಿಂದ ನಾಯಿಯ ಪ್ರಾಣ ಉಳಿದಿದೆ.

ಈ ಬಗ್ಗೆ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮನೆ ಬಾಗಿಲಿಗೇ ಚಿರತೆ ಆಗಮಿಸಿದ್ದರಿಂದ ಗ್ರಾಮಸ್ಥರಲ್ಲಿ ಇದೀಗ ಆತಂಕ ಶುರುವಾಗಿದೆ.ಕೂಡಲೇ ಚಿರತೆ ಸೆರೆಗೆ ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!