Monday, June 8, 2026
Homeಕರಾವಳಿಕಡಬ: ಸಾಕು ನಾಯಿಯನ್ನು ಬೇಟೆಯಾಡಲು ಬಂದ ಚಿರತೆ ಟಾಯ್ಲೆಟ್ ನೊಳಗೆ ಲಾಕ್!

ಕಡಬ: ಸಾಕು ನಾಯಿಯನ್ನು ಬೇಟೆಯಾಡಲು ಬಂದ ಚಿರತೆ ಟಾಯ್ಲೆಟ್ ನೊಳಗೆ ಲಾಕ್!

- Advertisement -
- Advertisement -

ಕಡಬ: ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆಯೊಂದು ನಾಯಿಯ ಜೊತೆ ಮನೆಯ ಶೌಚಾಲಯದಲ್ಲಿ ಬಂಧಿಯಾದ ಘಟನೆ ಇಂದು ಬೆಳಿಗ್ಗೆ ಕಡಬದ ಕೈಕಂಬದಲ್ಲಿ ನಡೆದಿದೆ.

ಸುಬ್ರಹ್ಮಣ್ಯ ಸಮೀಪದ ಕೈಕಂಬ ನಿವಾಸಿ ರೇಗಪ್ಪ ಎಂಬವರ ಮನೆಯ ಸಮೀಪ ಸಾಕು ನಾಯಿಯನ್ನು ಚಿರತೆಯೊಂದು ಅಟ್ಟಿಸಿಕೊಂಡು ಬಂದಿದೆ. ಚಿರತೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಸಾಕುನಾಯಿಯು ಮನೆಯ ಹೊರಗಿದ್ದ ಶೌಚಾಲಯಕ್ಕೆ ಹೊಕ್ಕಿದ್ದು, ಚಿರತೆಯು ನಾಯಿಯನ್ನು ಹಿಂಬಾಲಿಸಿ ಶೌಚಾಲಯದ ಒಳಗೆ ಬಂದಿದೆ.

ಇದನ್ನು ಗಮನಿಸಿದ ಮನೆಯವರು ಹೊರಗಿನಿಂದ ಶೌಚಾಲಯದ ಬಾಗಿಲನ್ನು ಹಾಕಿದ್ದು, ಇದೀಗ ನಾಯಿ ಮತ್ತು ಚಿರತೆ ಎರಡೂ ಶೌಚಾಲಯದ ಒಳಗೆ ಬಂಧಿಯಾಗಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಚಿರತೆಗೆ ಅರಿವಳಿಕೆ ಮದ್ದು ನೀಡಿ ಹಿಡಿಯಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!