Thursday, June 4, 2026
Homeಕರಾವಳಿಉಡುಪಿಆಹಾರ ಅರಸಿ ಬಂದು ಬಾವಿಗೆ ಬಿದ್ದ ಚಿರತೆ

ಆಹಾರ ಅರಸಿ ಬಂದು ಬಾವಿಗೆ ಬಿದ್ದ ಚಿರತೆ

- Advertisement -
- Advertisement -

ಕುಂದಾಪುರ: ಆಹಾರ ಅರಸಿಕೊಂಡು ಬಂದು ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕುಂದಾಪುರ ತಾಲೂಕಿನ ಕೆರಾಡಿಯ ಚಪ್ಪರಮಕ್ಕಿ ಗ್ರಾಮದಲ್ಲಿ ನಡೆದಿದೆ.

ಚಿರತೆ ಯಾವುದೋ ಪ್ರಾಣಿಯನ್ನು ಹಿಡಿಯುವ ಭರದಲ್ಲಿ ಆಯತಪ್ಪಿ  ಬಾವಿಗೆ ಬಿದ್ದಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿದ್ದಾರೆ. ಸುಮಾರು ಎರಡೂವರೆ ತಾಸು ಕಾರ್ಯಾಚರಣೆ ನಡೆಸಿ ಚಿರತೆಯನ್ನು ಬಾವಿಯಿಂದ ಮೇಲೆಕ್ಕೆತ್ತಲಾಗಿದ್ದು, ಸುರಕ್ಷಿತ ಪ್ರದೇಶಕ್ಕೆ ಬಿಡಲಾಗಿದೆ.

- Advertisement -

Latest News

error: Content is protected !!