Friday, May 3, 2024
Homeಕೊಡಗುಕೊಡಗು, ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲಿ ಭೂಕಂಪನ ಅನುಭವ: ಕೊಡಗು ಜಿಲ್ಲೆಯ ಚೆಂಬು ಗ್ರಾಮವೇ ಭೂಕಂಪನದ...

ಕೊಡಗು, ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲಿ ಭೂಕಂಪನ ಅನುಭವ: ಕೊಡಗು ಜಿಲ್ಲೆಯ ಚೆಂಬು ಗ್ರಾಮವೇ ಭೂಕಂಪನದ ಕೇಂದ್ರ ಬಿಂದು 

spot_img
- Advertisement -
- Advertisement -

ಕೊಡಗು:  ಇಂದು ಬೆಳಗ್ಗೆ 7-45ರ ಸುಮಾರಿಗೆ ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲಿ ಭೂಕಂಪನ ಅನುಭವವಾಗಿದ್ದು ಕಳೆದ ಮೂರು ದಿನಗಳಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬುಲೆಟಿನ್ ಬಿಡುಗಡೆಗೊಳಿಸಿದೆ. ರಿಕ್ಟರ್ ಮಾಪಕದಲ್ಲಿ 3.0 ದಾಖಲಾಗಿದ್ದು, ಭೂಕಂಪದ ಕೇಂದ್ರ ಬಿಂದು ಕೊಡಗು ಜಿಲ್ಲೆಯ ಚೆಂಬು ಗ್ರಾಮ ಎಂದು ತಿಳಿದುಬಂದಿದೆ.

ಬೆಳಿಗ್ಗೆ 7 ಗಂಟೆ 45 ನಿಮಿಷ 47 ಸೆಕೆಂಡಿಗೆ 3ರಿಂದ 4 ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ್ದು ಸಂಭವಿಸಿದ್ದು, ಮಡಿಕೇರಿ – ದಕ್ಷಿಣ ಕನ್ನಡ ಗಡಿಗ್ರಾಮವಾಗಿರುವ ಚೆಂಬುವಿನಿಂದ 5.2 ವಾಯುವ್ಯ ದಿಕ್ಕಿನಲ್ಲಿ ಭೂಮಿಯ 15 ಕಿಲೋಮೀಟರ್ ಆಳದಲ್ಲಿ ರಿಕ್ಟರ್ ಮಾಪಕ 3.೦ ರಷ್ಟು ಭೂಕಂಪನವಾಗಿದೆ. ಇದರ ಪರಿಣಾಮ ಮಡಿಕೇರಿ ತಾಲೂಕಿನ ಕರಿಕೆ ಭಾಗದ ವಾಯುವ್ಯದಲ್ಲಿ 8.2 ಕಿಲೋಮೀಟರ್ ವ್ಯಾಪ್ತಿಯಲ್ಲಿ, ಸಂಪಾಜೆ ಭಾಗದ ಪಶ್ಚಿಮದಲ್ಲಿ 11.4 ಕಿಲೋಮೀಟರ್ ವ್ಯಾಪ್ತಿಯಲ್ಲಿ, ಸುಳ್ಯ ತಾಲೂಕು ಭಾಗದ ಆಗ್ನೇಯದಲ್ಲಿ 12.1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದೆ. ಹಾಗಾಗಿ ಈ ಪ್ರದೇಶದ 4೦ರಿಂದ 5೦ ಕಿಲೋಮೀಟರ್ ದೂರದಲ್ಲಿ ಭೂಕಂಪನದ ಅನುಭವವಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ಮಾಹಿತಿ ನೀಡಿದೆ.

- Advertisement -
spot_img

Latest News

error: Content is protected !!