Wednesday, June 3, 2026
Homeಕರಾವಳಿಮಂಗಳೂರು: ಉಳ್ಳಾಲದಲ್ಲಿ ರಾಸಾಯನಿಕ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಮಂಗಳೂರು: ಉಳ್ಳಾಲದಲ್ಲಿ ರಾಸಾಯನಿಕ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

- Advertisement -
- Advertisement -

ಮಂಗಳೂರು: ರಾಸಾಯನಿಕ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಕೇರಳದ ಕೊಚ್ಚಿಯಿಂದ ಬೈಕಂಪಾಡಿ ಪೈಂಟ್‌ ತಯಾರಿಕಾ ಇಂಡಸ್ಟ್ರಿಗೆ ರಾಸಾಯನಿಕ ಸಾಗಿಸುತ್ತಿದ್ದಾಗ ಟ್ಯಾಂಕರ್‌ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ತಡರಾತ್ರಿ ಹೆದ್ದಾರಿ ಮಧ್ಯೆಯೇ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲವು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ಟ್ಯಾಂಕರ್‌ನಲ್ಲಿದ್ದ ರಾಸಾಯನಿಕ ಯಾವುದೇ ರೀತಿಯಲ್ಲಿ ಸೋರಿಕೆಯಾಗದಂತೆ ಕ್ರಮವಹಿಸಿದ್ದರು.

- Advertisement -

Latest News

error: Content is protected !!