Thursday, June 4, 2026
Homeಕ್ರೀಡೆ5ನೇ ಬಾರಿಗೆ ಐಪಿಎಲ್ ಟ್ರೋಫಿಗೆ ಮುತ್ತಿಟ್ಟ ಚೆನ್ನೈ ಸೂಪರ್ ಕಿಂಗ್ಸ್

5ನೇ ಬಾರಿಗೆ ಐಪಿಎಲ್ ಟ್ರೋಫಿಗೆ ಮುತ್ತಿಟ್ಟ ಚೆನ್ನೈ ಸೂಪರ್ ಕಿಂಗ್ಸ್

- Advertisement -
- Advertisement -

ನ್ಯೂಸ್ ಡೆಸ್ಕ್ ; 2023ರ ಐಪಿಎಲ್ ಪಂದ್ಯಕ್ಕೆ ಅದ್ಧೂರಿ ತೆರೆ ಬಾರಿದೆ. ನಿನ್ನೆ ನಡೆದ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ರೋಚಕ ಫೈನಲ್ ಪಂದ್ಯದಲ್ಲಿ ಚೆನ್ನೈ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದೆ. ಚೆನ್ನೈ ಸೂಪರ್ ಕಿಂಗ್ಸ್ 5ನೇ ಬಾರಿಗೆ ಐಪಿಎಲ್ ಪ್ರಶಸ್ತಿ ಗೆದ್ದುಕೊಂಡಿದೆ.

ಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು 5 ವಿಕೆಟ್​ಗಳಿಂದ ಸೋಲಿಸಿದ ಚೆನ್ನೈ ಸೂಪರ್ ಕಿಂಗ್ಸ್ 5ನೇ ಬಾರಿಗೆ ಐಪಿಎಲ್ ಪ್ರಶಸ್ತಿ ಗೆದ್ದುಕೊಂಡಿದೆ. 15ನೇ ಓವರ್​ನ ಕೊನೆಯ ಎರಡು ಎಸೆತಗಳಲ್ಲಿ ಒಂದು ಸಿಕ್ಸರ್ ಹಾಗೂ 1 ಬೌಂಡರಿ ಬಾರಿಸಿದ ಜಡೇಜಾ ಚೆನ್ನೈಗೆ ರೋಚಕ ಜಯ ತಂದುಕೊಟ್ಟರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಸಾಯಿ ಸುದರ್ಶನ್ ಹಾಗೂ ಸಾಹ ಅವರ ಅದ್ಭುತ ಅರ್ಧಶತಕದ ನೆರವಿನಿಂದಾಗಿ 4 ವಿಕೆಟ್ ಕಳೆದುಕೊಂಡು 214 ರನ್ ಕಲೆಹಾಕಿತು.

ಈ ಗುರಿ ಬೆನ್ನಟ್ಟಿದ ಚೆನ್ನೈಗೆ ವರುಣ ಅಡ್ಡಗಾಲು ಹಾಕಿದ. ಹೀಗಾಗಿ ಪಂದ್ಯವನ್ನು ನಿಲ್ಲಿಸಬೇಕಾಯಿತು. ಅಂತಿಮವಾಗಿ ಪಂದ್ಯ ಆರಂಭವಾದಾಗ ಚೆನ್ನೈ ಗೆಲುವಿಗೆ 15 ಓವರ್​ಗಳಲ್ಲಿ 171 ರನ್ ಟಾರ್ಗೆಟ್ ನೀಡಲಾಯಿತು. ಈ ಗುರಿ ಬೆನ್ನಟ್ಟಿದ ಚೆನ್ನೈ ಸಾಂಘಿಕ ಹೋರಾಟದಿಂದಾಗಿ ಕೊನೆಯ ಎಸೆತದಲ್ಲಿ ಗೆದ್ದು ಬೀಗಿತು.

- Advertisement -

Latest News

error: Content is protected !!