Tuesday, July 14, 2026
Homeಕರಾವಳಿಬಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಂಡೆಕ್ಟರ್ ಗೆ ಎದೆ ನೋವು; ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

ಬಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಂಡೆಕ್ಟರ್ ಗೆ ಎದೆ ನೋವು; ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

- Advertisement -
- Advertisement -

ಸುಳ್ಯ; ತೊಡಿಕಾನ ಖಾಸಗಿ ಅವಿನಾಶ್ ಬಸ್ ನಲ್ಲಿ ಕಂಡೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬರು ಎದೆನೋವಿನಿಂದ ಸಾವನ್ನಪ್ಪಿದ ಘಟನೆ ಅ.14 ಸೋಮವಾರದಂದು ನಡೆದಿದೆ.

ಮೃತ ದುರ್ದೈವಿ ಗುರು ಪ್ರಸಾದ್ ಕುಂಚಡ್ಕ ಆಗಿದ್ದು, ಅವರಿಗೆ 30 ವರ್ಷ ವಯಸ್ಸಾಗಿತ್ತು.

ಬಸ್ ನಲ್ಲಿ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ರಿಕ್ಷಾವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಅರಂಬೂರು ಬಳಿ ಆಟೋ ರಿಕ್ಷಾದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!