Friday, September 25, 2026
Homeಕರಾವಳಿಉಡುಪಿಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ

ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ

- Advertisement -
- Advertisement -

ಕುಂದಾಪುರ: ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಮೃತರನ್ನು ಕಟ್‌ಬೆಲ್ತೂರಿನ ರಾಘವೇಂದ್ರ ಜೋಗಿ (48) ಎಂದು ಗುರುತಿಸಲಾಗಿದೆ.

ಕಳೆದ 18 ವರ್ಷಗಳಿಂದ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು, ಮನೆಯಲ್ಲಿ ಡೆತ್‌ನೋಟ್ ಬರೆದಿಟ್ಟು ಸೆ. 24ರಂದು ಮಧ್ಯಾಹ್ನ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವೈಯಕ್ತಿಕ ಸಮಸ್ಯೆ ಅಥವಾ ಇತರ ಯಾವುದೋ ಕಾರಣದಿಂದ ಮನನೊಂದು ಈ ಕೃತ್ಯಕ್ಕೆ ಮುಂದಾಗಿರಬಹುದು ಎಂದು ಶಂಕಿಸಲಾಗಿದೆ.

ಮೃತರು ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.

ಈ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!