Sunday, June 7, 2026
Homeತಾಜಾ ಸುದ್ದಿರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಆಯೋಗ: ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ‌ ಘೋಷಣೆ

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಆಯೋಗ: ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ‌ ಘೋಷಣೆ

- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಇಂದು ರಾಜ್ಯ ಸರ್ಕಾರ ಶುಭ ಸುದ್ದಿ ಕೊಟ್ಟಿದೆ. ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿ ವೇತನ ಪರಿಷ್ಕರಣೆಗೆ ಆಯೋಗ ರಚನೆ ಮಾಡುವುದಾಗಿ ಘೋಷಿಸಿದೆ.

ವಿಧಾನಸಭೆಯಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಗೆ ರಾಜ್ಯ ಸರ್ಕಾರದ ಉತ್ತರ ನೀಡುವ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಆಯೋಗ ರಚನೆಯ ಘೋಷಣೆ ಮಾಡಿದ್ದಾರೆ. 7ನೇ ವೇತನ ಆಯೋಗದ ಅನ್ವಯ ವೇತನ ಮತ್ತು ಭತ್ಯೆ ಪರಿಷ್ಕರಣೆ ಸಂಬಂಧ ಕೇಂದ್ರ ಸರ್ಕಾರದ ಮಾದರಿಯಲ್ಲಿ ಅಧಿಕಾರಿಗಳ ವೇತನ ಸಮಿತಿ ರಚಿಸುವಂತೆ ಮಾರ್ಚ್ 3 ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರಿಗೆ ಪತ್ರ ಬರೆದಿದ್ದರು.

ಕೇಂದ್ರ ಸರ್ಕಾರ ಮಾದರಿಯ ವೇತನ ನೀಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹಾಗೂ ಪದಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿಧಾನಸೌಧದಲ್ಲಿ ಹೂಗುಚ್ಛ ನೀಡಿ ಧನ್ಯವಾದ ಅರ್ಪಿಸಿದರು.

- Advertisement -

Latest News

error: Content is protected !!