Tuesday, June 23, 2026
Homeಕರಾವಳಿಉಡುಪಿಉಡುಪಿ ಮತ್ತು ದ.ಕ.ಜಿಲ್ಲಾ ಪ್ರವಾಸದಲ್ಲಿರುವ ಸಿಎಂ : ಇಂದು ಕಡಿಯಾಳಿ ಮಹಿಷ ಮರ್ಧಿನಿ ದೇವಸ್ಥಾನದ ಬ್ರಹ್ಮಕಲಶದಲ್ಲಿ...

ಉಡುಪಿ ಮತ್ತು ದ.ಕ.ಜಿಲ್ಲಾ ಪ್ರವಾಸದಲ್ಲಿರುವ ಸಿಎಂ : ಇಂದು ಕಡಿಯಾಳಿ ಮಹಿಷ ಮರ್ಧಿನಿ ದೇವಸ್ಥಾನದ ಬ್ರಹ್ಮಕಲಶದಲ್ಲಿ ಭಾಗಿ

- Advertisement -
- Advertisement -

ಉಡುಪಿ: ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಇಂದು ಬೆಳಗ್ಗೆ ಕಡಿಯಾಳಿಯಲ್ಲಿರುವ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಅನಂತರ ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳಲ್ಲಿ ನಾಲ್ಕು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಸಿಎಂ, ಕಾರ್ಕಳದ ಎಣ್ಣೆಹೊಳೆ ಏತ ನೀರಾವರಿ ಯೋಜನೆ, ಹೆಬ್ರಿ ತಾಲೂಕು ಆಡಳಿತ ಸೌಧ,
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉದ್ಘಾಟಿಸಿ
ಹೆಬ್ರಿ ಬಸ್ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ
ನೆರವೇರಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ಮತಕ್ಷೇತ್ರದಲ್ಲಿ ಈ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ಅಪರಾಹ್ನದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ ತೆರಳಲಿರುವ ಸಿಎಂ, ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾಸಿರಿ ಯೋಜನೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ನಿನ್ನೆ ಸಂಜೆ ಉಡುಪಿಗೆ ಆಗಮಿಸಿದ್ದ‌ ಸಿಎಂ ಬೊಮ್ಮಾಯಿ ರಾತ್ರಿ ಮಣಿಪಾಲದಲ್ಲಿ ವಾಸ್ತವ್ಯ ಹೂಡಿದ್ದರು.

- Advertisement -

Latest News

error: Content is protected !!