- Advertisement -
![]()
- Advertisement -
ಬೆಂಗಳೂರು; ಇಂದು ಸಂಜೆ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ಪೀಕರಿಸಲಿದ್ದು ಅದಕ್ಕೂ ಮುನ್ನ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಡಿಕೆಶಿ ಆಶೀರ್ವಾದ ಪಡೆದಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಧವಳಗಿರಿ ನಿವಾಸದಲ್ಲಿ ಉಭಯ ನಾಯಕರು ಭೇಟಿಯಾಗಿದ್ದಾರೆ.
ಇನ್ನು ಮನೆಯಿಂದ ಹೊರಬಂದು ಆಲಂಗಿಸಿ ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ವಾಗತಿಸಿದ್ದಾರೆ. ಈ ವೇಳೆ ಯಡಿಯೂರಪ್ಪ ಮನೆಯ ದೇವರ ಕೋಣೆಯೊಳಗೆ ತೆರಳಿದ ಡಿ.ಕೆ. ಶಿವಕುಮಾರ್ ದೇವರಿಗೆ ನಮಸ್ಕರಿಸಿದ್ದಾರೆ. ಡಿ ಕೆ ಶಿವಕುಮಾರ್ ಗೆ ಶಾಲು ಹೊದಿಸಿ ಯಡಿಯೂರಪ್ಪ ಅಭಿನಂದಿಸಿದ್ದಾರೆ.
- Advertisement -


