Thursday, June 25, 2026
Homeಕರಾವಳಿಉಡುಪಿಕಾರ್ಕಳ: ಎಣ್ಣೆಹೊಳೆ ಅಣೆಕಟ್ಟಿಗೆ ಸಿಎಂ ಬಾಗಿನ ಅರ್ಪಣೆ

ಕಾರ್ಕಳ: ಎಣ್ಣೆಹೊಳೆ ಅಣೆಕಟ್ಟಿಗೆ ಸಿಎಂ ಬಾಗಿನ ಅರ್ಪಣೆ

- Advertisement -
- Advertisement -

ಕಾರ್ಕಳ: ಉಡುಪಿ‌ ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಬಸವರಾಜ‌ ಬೊಮ್ಮಾಯಿ ಕಾರ್ಕಳ ತಾಲೂಕಿಗೆ ಭೇಟಿ ಕೊಟ್ಟಿದ್ದಾರೆ.

ಕಾರ್ಕಳ ತಾಲೂಕಿನ ಎಣ್ಣೆಹೊಳೆ ಅಣೆಕಟ್ಟಿಗೆ ಬಾಗಿನ ಅರ್ಪಿಸಿದ ಸಿಎಂ, ಎಣ್ಣೆಹೊಳೆ ಏತ ನೀರಾವರಿ ಯೋಜನೆ ಉದ್ಘಾಟಿಸಿದರು.

ಇದೇ ವೇಳೆ, ಏತ ನೀರಾವರಿ ಯೋಜನೆಯ ಜಾಕ್ ವೆಲ್ ಪಂಪ್ ಹೌಸ್ ಅನ್ನು ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು.

ಕರ್ನಾಟಕ ನೀರಾವರಿ ನಿಗಮ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಿದೆ.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಇಂಧನ ಸಚಿವ ಸುನೀಲ್ ಕುಮಾರ್ , ಕಂದಾಯ ಸಚಿವ ಆರ್. ಅಶೋಕ್,‌ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!