Tuesday, July 14, 2026
Homeಕರಾವಳಿಮಂಗಳೂರುಅ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದ.ಕ. ಜಿಲ್ಲಾ ಪ್ರವಾಸ; ಇಂಟರ್ ನ್ಯಾಷನಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಉದ್ಘಾಟನೆ

ಅ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದ.ಕ. ಜಿಲ್ಲಾ ಪ್ರವಾಸ; ಇಂಟರ್ ನ್ಯಾಷನಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಉದ್ಘಾಟನೆ

- Advertisement -
- Advertisement -

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅ.27 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅ.27 ರಂದು ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿರುವ ಸಿದ್ದರಾಮಯ್ಯ, ನ್ಯೂ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ -2025 ಬ್ಯಾಡ್ಮಿಂಟನ್ ಟೂರ್ನಮೆಂಟ್ ಅನ್ನು ಉದ್ಘಾಟಿಸಲಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದ ಬಳಿಕ ನ್ಯೂ‌ ಉರ್ವ ಒಳಾಂಗಣ ಕ್ರೀಡಾಂಗಣದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಸಿದ್ದರಾಮಯ್ಯ ರಾತ್ರಿ 7.30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರಿನಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

- Advertisement -

Latest News

error: Content is protected !!