Tuesday, June 16, 2026
Homeಚಿಕ್ಕಮಗಳೂರುಚಿಕ್ಕಮಗಳೂರು : ಅರಣ್ಯ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಚಿಕ್ಕಮಗಳೂರು : ಅರಣ್ಯ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

- Advertisement -
- Advertisement -

ಚಿಕ್ಕಮಗಳೂರು : ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಎ.ಸಿ.ಎಫ್. ಶ್ರೀನಿವಾಸ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ ಹಾಗೂ ಕಚೇರಿ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಡೂರಿನಲ್ಲಿರುವ ಶ್ರೀನಿವಾಸ್ ಸಹೋದರಿ ಮನೆ ಮೇಲೂ ಲೋಕಾ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಇಲಾಖೆಯಲ್ಲಿ ಅಕ್ರಮ ನಡೆಸಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದ ಹಿನ್ನೆಲೆ ಲೋಕಾಯುಕ್ತ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!