Saturday, June 6, 2026
HomeUncategorizedಚಿಕ್ಕಮಗಳೂರು: ಕೊಟ್ಟಿಗೆಹಾರದಲ್ಲಿ ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ; 200 ಲೀಟರ್ ಬೆಲ್ಲದ ಕೊಳೆ ಹಾಗೂ ಎರಡು...

ಚಿಕ್ಕಮಗಳೂರು: ಕೊಟ್ಟಿಗೆಹಾರದಲ್ಲಿ ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ; 200 ಲೀಟರ್ ಬೆಲ್ಲದ ಕೊಳೆ ಹಾಗೂ ಎರಡು ಲೀಟರ್ ಕಳ್ಳಭಟ್ಟಿ ವಶ

- Advertisement -
- Advertisement -

ಚಿಕ್ಕಮಗಳೂರು: ಅಕ್ರಮ ಕಳ್ಳಬಟ್ಟಿ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಲೀಟರ್ ಬೆಲ್ಲದ ಕೊಳೆ ಹಾಗೂ ಎರಡು ಲೀಟರ್ ಕಳ್ಳಭಟ್ಟಿಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿರುವ ಘಟನೆ ಕೊಟ್ಟಿಗೆಹಾರ ಬಾಳೂರು ಠಾಣಾ ವ್ಯಾಪ್ತಿಯ ಮಲೆಮನೆ ಎಂಬಲ್ಲಿ ನಡೆದಿದೆ.

 ಬಾಳೂರು ಪೊಲೀಸರು ಅಕ್ರಮ ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ ನಡೆಸಿದ್ದು ಕಳ್ಳಬಟ್ಟಿ ಹಾಗೂ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಮಲೆ ಮನೆ ಗ್ರಾಮದ ಸುರೇಶ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಬಾಳೂರು ಠಾಣಾಧಿಕಾರಿ ಪವನ್ ಹಾಗೂ ಸಿಬ್ಬಂದಿ ಸುರೇಶ ಎಂಬವರು ಕಳ್ಳಬಟ್ಟಿ ತಯಾರಿಸುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ.

- Advertisement -

Latest News

error: Content is protected !!