Monday, May 20, 2024
Homeತಾಜಾ ಸುದ್ದಿಚಿಕ್ಕಪೇಟೆಯಲ್ಲಿ ಹಾಡಹಗಲೇ ದರೋಡೆ ಪ್ರಕರಣ: ಓರ್ವ ಆರೋಪಿಯನ್ನು ಬಂಧಿಸಿದ ಪೊಲೀಸರು

ಚಿಕ್ಕಪೇಟೆಯಲ್ಲಿ ಹಾಡಹಗಲೇ ದರೋಡೆ ಪ್ರಕರಣ: ಓರ್ವ ಆರೋಪಿಯನ್ನು ಬಂಧಿಸಿದ ಪೊಲೀಸರು

spot_img
- Advertisement -
- Advertisement -

ಬೆಂಗಳೂರು : ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಹಾಡಹಗಲೇ ಕಳೆದ ಭಾನುವಾರ ಯುವಕರಿಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ನಗರ ಸಿಟಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ.

22 ವರ್ಷದ ಜಾನಿ ಬಂಧಿತ ಆರೋಪಿಯಾಗಿದ್ದು, ಈತ ಆಜಾದ್ ನಗರ ನಿವಾಸಿ ಎಂಬ ಮಾಹಿತಿ ಲಭಿಸಿದೆ. ಈ ಹಿಂದೆಯೇ ಆರೋಪಿ ದರೋಡೆ ಪ್ರಕರಣದಲ್ಲಿ ಜೈಲು ಸೇರಿ ಕಳೆದ ಮಾರ್ಚ್‍ನಲ್ಲಿ ಬಿಡುಗಡೆಯಾಗಿದ್ದ. ಆ ಬಳಿಕ ಮತ್ತೆ ತನ್ನ ಹಳೆ ಚಾಳಿ ಮುಂದುವರಿಸಿದ್ದ ಆರೋಪಿ, ಡ್ರ್ಯಾಗರ್ ಹಿಡಿದು ಬೆದರಿಸಿ ಹಣ, ಚಿನ್ನ ದರೋಡೆ ಮಾಡ್ತಿದ್ದ.

ಇನ್ನು ಈ ದರೋಡೆ  ವಿಡಿಯೋವನ್ನು ಹಂಚಿಕೊಂಡಿದ್ದ ಐಪಿಎಸ್ ಅಧಿಕಾರಿ ರೂಪ ಅವರು, ಬೆಂಗಳೂರು ಪೊಲೀಸರಿಗೆ ಟ್ವಿಟ್ಟರ್ ನಲ್ಲಿ ಟ್ಯಾಗ್ ಮಾಡಿ ಕ್ರಮಕೈಗೊಳ್ಳಲು ಮನವಿ ಮಾಡಿದ್ದರು. ಬೆಂಗಳೂರು ಪೊಲೀಸರು ಕೂಡ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು.

- Advertisement -
spot_img

Latest News

error: Content is protected !!