Monday, April 29, 2024
Homeಕರಾವಳಿಉಡುಪಿಹೆರಿಗೆ  ವೇಳೆ ಮೃತಪಟ್ಟ ಮಗು:ಕುಂದಾಪುರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ಧ ರಾತ್ರಿಯಿಡೀ ಕುಟುಂಬಸ್ಥರ ಪ್ರತಿಭಟನೆ

ಹೆರಿಗೆ  ವೇಳೆ ಮೃತಪಟ್ಟ ಮಗು:ಕುಂದಾಪುರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ಧ ರಾತ್ರಿಯಿಡೀ ಕುಟುಂಬಸ್ಥರ ಪ್ರತಿಭಟನೆ

spot_img
- Advertisement -
- Advertisement -

ಕುಂದಾಪುರ: ಹೆರಿಗೆ ವೇಳೆ ಮಗು ಮೃತಪಟ್ಟು ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಆಸ್ಪತ್ರೆ ಎದುರು ಕುಟುಂಬಸ್ಥರು ಹಾಗೂ ಸ್ಥಳಿಯರಿಂದ ಪ್ರತಿಭಟನೆ ನಡೆದ ಘಟನೆ ಕುಂದಾಪುರದಲ್ಲಿ ನಡೆದಿದೆ.ಕುಂದಾಪುರ ಸರಕಾರಿ ಆಸ್ಪತ್ರೆ ಮುಂದೆ ರಾತ್ರಿಯಿಡೀ ಪ್ರತಿಭಟನೆ ನಡೆದಿದ್ದು, ಬೆಳಗ್ಗೆಯೂ ಮುಂದುವರಿದಿದೆ.

ಗಂಗೊಳ್ಳಿ ಮೂಲದ ಶ್ರೀನಿವಾಸ ಖಾರ್ವಿ ಮತ್ತು ಜ್ಯೋತಿ ಎಂಬ ದಂಪತಿಗಳ ಮಗು ಮೃತಪಟ್ಟಿದ್ದು, ನವೆಂಬರ್ 17 ರಂದು ಹೆರಿಗೆ ನೋವಿನ ಕಾರಣದಿಂದ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಗೆ ಜ್ಯೋತಿ ಅವರನ್ನು ದಾಖಲು ಮಾಡಲಾಗಿತ್ತು.

ನಿನ್ನೆ ಬೆಳಿಗ್ಗೆ ಹೆರಿಗೆ ಮಾಡಿಸಿದ್ದ ವೈದ್ಯರು ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದರು. ಇದರಿಂದಾಗಿ ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಅಕ್ರೋಶಗೊಂಡ ಊರಿನವರು ರಾತ್ರಿಯಿಂದ ಪ್ರತಿಭಟನೆ ನಡೆಸಿದ್ದು, ತನಿಖೆ ನಡೆಸಬೇಕು ಮತ್ತು ಉಡುಪಿ ಡಿಸಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಸ್ಥಳಕ್ಕೆ ಬರುವಂತೆ ಒತ್ತಾಯಿಸಿದ್ದಾರೆ.

ಮಗುವಿನ ಹೊಕ್ಕುಳ ಬಳ್ಳಿ ಸುತ್ತಿಕೊಂಡು ಸಾವಾಗಿದೆ ಎಂದು ಉಡಾಫೆಯಾಗಿ ಮಾತಾಡಿದ್ದು, ಹೆರಿಗೆ ಸಂದರ್ಭದಲ್ಲಿ ರಕ್ತಸ್ರಾವವಿದೆ ಎಂದರೂ ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ ಎಂದು ಕುಟುಂಬಸ್ಥರು ವೈದ್ಯರ ವಿರುದ್ಧ ಆರೋಪಿಸಿದ್ದಾರೆ.

ಸ್ಥಳಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕೂಡಾ ಭೇಟಿ ನೀಡಿ ವೈದ್ಯರ ನಿರ್ಲಕ್ಷ್ಯ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

- Advertisement -
spot_img

Latest News

error: Content is protected !!