Friday, April 26, 2024
Homeಇತರ19 ಗಂಟೆಯ ಕಾರ್ಯಾಚರಣೆಯ ಬಳಿಕ ಕಟ್ಟಡಗಳ ಅವಶೇಷಗಳಡಿ ಸಿಲುಕಿದ್ದ ಮಗುವಿನ ರಕ್ಷಣೆ

19 ಗಂಟೆಯ ಕಾರ್ಯಾಚರಣೆಯ ಬಳಿಕ ಕಟ್ಟಡಗಳ ಅವಶೇಷಗಳಡಿ ಸಿಲುಕಿದ್ದ ಮಗುವಿನ ರಕ್ಷಣೆ

spot_img
- Advertisement -
- Advertisement -

ಮುಂಬೈ: ಮಹಾರಾಷ್ಟ್ರದ ರಾಯ್ ಗಢ್ ದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತದಲ್ಲಿ ಅವಶೇಷಗಳಡಿ ಸಿಲುಕಿದ್ದ 5 ವರ್ಷದ ಮಗುವನ್ನು ಸತತ 19 ಗಂಟೆಗಳ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಲಾಗಿದೆ. ಮಗುವನ್ನು ರಕ್ಷಣಾ ಕಾರ್ಯಾಚರಣೆ ಮೂಲಕ ಹೊರತೆಗೆದ ನಂತರ ಎನ್ ಡಿಆರ್ ಎಫ್ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನು ಐದು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪ್ರಕರಣದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯ ಮುಂದುವರಿದಿದೆ. ಸುಮಾರು 17 ಮಂದಿ ಅವಶೇಷದಡಿ ಸಿಲುಕಿರುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.

ಐದು ಅಂತಸ್ತಿನ ಕಟ್ಟಡದಲ್ಲಿ 41 ಫ್ಲ್ಯಾಟ್ಸ್ ಇದ್ದು, 85 ಮಂದಿ ವಾಸವಾಗಿದ್ದರು. ಕಟ್ಟಡ ದಿಧೀರನೇ ಕುಸಿದು ಬೀಳಲು ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದದ್ದು ಕಾರಣವಿರಬಹುದು ಎಂದು ಶಂಕಿಸಲಾಗಿತ್ತು.

ಈವರೆಗೆ 60 ಮಂದಿಯನ್ನು ರಕ್ಷಿಸಲಾಗಿದೆ.

- Advertisement -
spot_img

Latest News

error: Content is protected !!