Thursday, June 4, 2026
Homeಚಿಕ್ಕಮಗಳೂರುಚಿಕ್ಕಮಗಳೂರು : ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು 2 ಮಕ್ಕಳು ಸಾವು

ಚಿಕ್ಕಮಗಳೂರು : ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು 2 ಮಕ್ಕಳು ಸಾವು

- Advertisement -
- Advertisement -

ಚಿಕ್ಕಮಗಳೂರು : ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು 2 ಮಕ್ಕಳು ಸಾವನ್ನಪ್ಪಿರುವ ಘಟನೆ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ನಡೆದಿದೆ. ಮಧ್ಯಪ್ರದೇಶ ಮೂಲದ ಸುನೀತಾ ಎಂಬವರ ಮಕ್ಕಳಾದ ಸೀಮಾ (6), ರಾಧಿಕಾ (2) ಮೃತ ಮಕ್ಕಳು.

ಕೂಲಿಗಾಗಿ ಮಧ್ಯಪ್ರದೇಶದಿಂದ ಬಂದು ತೋಟದ ಮನೆಯಲ್ಲಿ ಕುಟುಂಬ ವಾಸವಾಗಿತ್ತು. ಮಕ್ಕಳನ್ನ ಮನೆಯಲ್ಲೇ ಬಿಟ್ಟು ತೋಟದ ಕೆಲಸಕ್ಕೆ ತಾಯಿ ಹೋಗಿದ್ದರು. ಸಂಜೆ ಮನೆಗೆ ಬಂದಾಗ ಮಕ್ಕಳು ಇಲ್ಲದ್ದನ್ನ ಕಂಡು ತಾಯಿ ಹುಡುಕಾಡಿದಾಗ ಬಾವಿಯಲ್ಲಿ ಮಕ್ಕಳ ಮೃತದೇಹ ಪತ್ತೆಯಾಗಿದೆ.ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!