- Advertisement -
- Advertisement -
ಕುಂದಾಪುರ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಳ್ಳತನ ಮಾಡಿರುವ ಘಟನೆ ಕುಂದಾಪುರದ ಕಾಳಾವರ ಗ್ರಾಮದ ನಡುಬೆಟ್ಟು ಎಂಬಲ್ಲಿ ನಡೆದಿದೆ.
ನಿನ್ನೆ ಮಧ್ಯಾಹ್ನ 12.10ರ ಸುಮಾರಿಗೆ ಸ್ಥಳೀಯ ನಿವಾಸಿ ಪದ್ದಮ್ಮ ಶೆಡ್ತಿ ಎಂಬವರು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿ ರಸ್ತೆ ಬದಿ ಬೈಕ್ ನಿಲ್ಲಿಸಿ ಪದ್ದಮ್ಮ ಬಳಿ ‘ಇಲ್ಲಿ ರಾಮಣ್ಣನ ಮನೆ ಎಲ್ಲಿ’ ಎಂದು ಕೇಳಿದ್ದಾನೆ. ಆ ಹೆಸರಿನವರು ಇಲ್ಲಿ ಯಾರೂ ಇಲ್ಲ ಎಂದು ಹೇಳುವಷ್ಟರಲ್ಲಿ ಕುತ್ತಿಗೆಯಲ್ಲಿದ್ದ ಎರಡು ಪವನ್ ತೂಕದ ಚಿನ್ನದ ಚೈನ್‌ನ್ನು ಬಲಾತ್ಕಾರವಾಗಿ ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಆರೋಪಿ ಬೆನ್ನಿಗೆ ಸ್ಕೂಲ್ ಬ್ಯಾಗ್ ಹಾಕಿಕೊಂಡಿದ್ದು, ತಲೆಗೆ ಹೆಲ್ಮೆಟ್ ಹಾಕಿರುವುದಾಗಿ ಪದ್ದಮ್ಮ ಶೆಡ್ತಿ ಮಗ ಅಶೋಕ್ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
- Advertisement -