Sunday, June 7, 2026
Homeತಾಜಾ ಸುದ್ದಿನಾಳೆ ಬೆಳಗ್ಗೆ 11ಗಂಟೆಗೆ ಮಧುಗಿರಿಯ ಜಕ್ಕೇನಹಳ್ಳಿಯಲ್ಲಿ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ

ನಾಳೆ ಬೆಳಗ್ಗೆ 11ಗಂಟೆಗೆ ಮಧುಗಿರಿಯ ಜಕ್ಕೇನಹಳ್ಳಿಯಲ್ಲಿ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ

- Advertisement -
- Advertisement -

ಬೆಂಗಳೂರು: ಹೃದಯಾಘಾತದಿಂದ ಮೃತಪಟ್ಟ ನಟ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಾಳೆ ಬೆಳಗ್ಗೆ 11ಗಂಟೆಗೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಮಧುಗಿರಿಯಲ್ಲಿ ಅವರ ಕುಟುಂಬಕ್ಕೆ ಸೇರಿದ ಜಾಗವಿರುವ ಕಾರಣದಿಂದ ಅಲ್ಲೇ ಅಂತ್ಯಕ್ರಿಯೆ ನಡೆಸಲಾಗುತ್ತಿದೆ.

ಇನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಮನೆ ಸುತ್ತ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗುತ್ತಿದೆ. ಇನ್ನು ಕೊರೋನಾ ಹಿನ್ನಲೆಯಲ್ಲಿ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ಅವಕಾಶ ಇಲ್ಲ ಎನ್ನಲಾಗಿದೆ.

ಸದ್ಯ ಚಿರು ಅವರ ಸೋದರ ಮಾವ ಅರ್ಜುನ್‌ ಸರ್ಜಾ ಹಾಗೂ ಅವರ ಅಜ್ಜಿಗಾಗಿ ಕುಟುಂಬದ ಸದ್ಯಸರು ಕಾಯುತ್ತಿದ್ದು, ಸದ್ಯ ಇಬ್ಬರು ಕೂಡ ಚನ್ನೈನಲ್ಲಿ ಇದ್ದು ಬೆಂಗಳೂರಿಗೆ ಅವರು ಬರಲು ನಾಲ್ಕು ಗಂಟೆ ಬೇಕಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!