- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲರಾ ರೋಗದ ಆತಂಕ ಎದುರಾಗಿದೆ.
ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮದ ವ್ಯಕ್ತಿಯೋರ್ವನಲ್ಲಿ ಕಾಲರಾ ಸೋಂಕು ಪತ್ತೆಯಾಗಿದೆ.
ಉಡುಪಿ ಜಿಲ್ಲೆಯ ಹೊಸ್ಮಾರುವಿನ ಹೋಟೆಲ್ ಒಂದರಿಂದ ಸೊಂಕು ಹರಡಿರುವ ಶಂಕೆ ವ್ಯಕ್ತವಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.
ಕಲುಷಿತ ಆಹಾರದಿಂದ ಕಾಲರಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹೋಟೆಲ್ ಮಾಲೀಕರ ಜೊತೆ ಜಿಲ್ಲಾ ಆರೋಗ್ಯ ಇಲಾಖೆ ವಿಶೇಷ ಸಭೆ ನಡೆಸಿ
ಕಡ್ಡಾಯವಾಗಿ ಆಹಾರ ಗುಣಮಟ್ಟದ ಬಗ್ಗೆ ಜಾಗ್ರತೆ ವಹಿಸಲು ಸೂಚನೆ ನೀಡಿದೆ.
- Advertisement -