Sunday, May 19, 2024
Homeಕರಾವಳಿಉಡುಪಿಮರುಮೌಲ್ಯಮಾಪನದಲ್ಲಿ ಅನನ್ಯ ಎನ್.ಕೆಗೆ 625 ಅಂಕ; ರಾಜ್ಯ ಮಟ್ಟದಲ್ಲಿ ಮೊದಲ ರ್‍ಯಾಂಕ್ ಪಡೆದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ...

ಮರುಮೌಲ್ಯಮಾಪನದಲ್ಲಿ ಅನನ್ಯ ಎನ್.ಕೆಗೆ 625 ಅಂಕ; ರಾಜ್ಯ ಮಟ್ಟದಲ್ಲಿ ಮೊದಲ ರ್‍ಯಾಂಕ್ ಪಡೆದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ

spot_img
- Advertisement -
- Advertisement -

 ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅನನ್ಯ ಎನ್.ಕೆ ಅವರು ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನದಲ್ಲಿ 625 ಅಂಕ ಗಳಿಸುವ ಮೂಲಕ ರಾಜ್ಯ ಮಟ್ಟದಲ್ಲಿ ಮೊದಲ ರ್‍ಯಾಂಕ್ ಪಡೆದುಕೊಂಡಿದ್ದಾರೆ.

ಮೊದಲು ಫಲಿತಾಂಶ ಪ್ರಕಟಗೊಂಡಾಗ ಅವರಿಗೆ 624 ಅಂಕಗಳು ಲಭಿಸಿದ್ದು, ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದು ಈಗ ಫಲಿತಾಂಶ ಪ್ರಕಟಗೊಂಡಿದೆ. ವಿಜ್ಞಾನ ವಿಷಯದಲ್ಲಿ ಪೂರ್ಣ ಅಂಕ ಪಡೆಯುವುದರ ಮೂಲಕ ಕುಂಟಲ್ಪಾಡಿಯ ನಯನಕುಮಾರ್ ಹಾಗೂ ಭುವನೇಶ್ವರಿ ದಂಪತಿಯ ಪುತ್ರಿ ಅನನ್ಯ ಎನ್.ಕೆ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ತನ್ನದಾಗಿರಿಸಿದ್ದಾರೆ.

ಸಂಸ್ಥೆಯ ಇನ್ನೋರ್ವ ವಿದ್ಯಾರ್ಥಿ ರಾಯನ್ ಡಿಸೋಜ ಅವರು ಮರು ಮೌಲ್ಯಮಾಪನದಲ್ಲಿ ಇಂಗ್ಲೀಷ್ ವಿಷಯದಲ್ಲಿ 8 ಅಂಕಗಳನ್ನು ಹೆಚ್ಚು ಪಡೆದಿದ್ದು ಒಟ್ಟು ಅಂಕಗಳನ್ನು 623ಕ್ಕೆ ಏರಿಸಿಕೊಂಡಿದ್ದಾರೆ. ಈ ಮುಖೇನ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಮತ್ತೋರ್ವ ವಿದ್ಯಾರ್ಥಿನಿ ಸಾನ್ವಿ ಎ.ಎಸ್ ಕೂಡಾ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದು, ಈ ಮೊದಲು 605 ಅಂಕಗಳನ್ನು ಗಳಿಸಿದ್ದರು. ಪ್ರಸ್ತುತ 11 ಹೆಚ್ಚುವರಿ ಅಂಕಗಳನ್ನು ಪಡೆಯುವ ಮೂಲಕ ಒಟ್ಟು ಅಂಕಗಳು 616ಕ್ಕೆ ಏರಿಕೆಯಾಗಿದೆ.

- Advertisement -
spot_img

Latest News

error: Content is protected !!