- Advertisement -
![]()
- Advertisement -
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಹೊಸ ವರ್ಷ, ಕ್ರಿಸ್‌ಮಸ್ ಹಬ್ಬಗಳ ಹಿನ್ನೆಲೆಯಲ್ಲಿ ಸಂಚಾರಿ ನಿಯಮಗಳ ಕಟ್ಟುನಿಟ್ಟಿನ ಪಾಲನೆಗಾಗಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.
ಡಿಸೆಂಬರ್ 24 ರಿಂದ ಡಿಸೆಂಬರ್ 31 ರವರೆಗೆ ನಡೆದ ಈ ವಿಶೇಷ ಕಾರ್ಯಾಚರಣೆಯ ಭಾಗವಾಗಿ ಜಿಲ್ಲೆಯಾದ್ಯಂತ ಒಟ್ಟು 29 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಈ ಅವಧಿಯಲ್ಲಿ ಒಟ್ಟು 1,199 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಒಟ್ಟು 9,62,400 ರೂ. ದಂಡ ವಸೂಲಿ ಮಾಡಲಾಗಿದೆ.
ದಾಖಲಾದ ಪ್ರಕರಣಗಳ ವಿವರ:
. 103 ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಪ್ರಕರಣಗಳು
. 803 ಹೆಲ್ಮೆಟ್ ರಹಿತ ಚಲಾಯಿಸಿದ ಪ್ರಕರಣಗಳು
. 243 ಸೀಟ್ ಬೆಲ್ಟ್ ಧರಿಸದೆ ವಾಹನ ಚಲಾಯಿಸಿದ ಪ್ರಕರಣಗಳು
. 35 ತ್ರಿಬಲ್ ರೈಡಿಂಗ್ ಪ್ರಕರಣಗಳು
. 15 ವಾಹನ ಚಾಲನೆ ವೇಳೆ ಮೊಬೈಲ್ ಬಳಸಿದ ಪ್ರಕರಣಗಳು
ಈ ಎಲ್ಲಾ ಪ್ರಕರಣಗಳು ಸೇರಿದಂತೆ ಹಲವು ಪ್ರಕರಣಗಳ ವಿವರವನ್ನು ಪೊಲೀಸ್ ಅಧೀಕ್ಷಕರು ನೀಡಿದ್ದಾರೆ.
- Advertisement -


