Thursday, June 4, 2026
Homeಚಿಕ್ಕಮಗಳೂರುಕೋಟ ಶ್ರೀನಿವಾಸ ಪೂಜಾರಿಗೆ ಚುನಾವಣಾ ಖರ್ಚಿಗೆ 25 ಸಾವಿರ ರೂ. ಕೊಟ್ಟ ಚುರುಮುರಿ ವ್ಯಾಪಾರಿ!

ಕೋಟ ಶ್ರೀನಿವಾಸ ಪೂಜಾರಿಗೆ ಚುನಾವಣಾ ಖರ್ಚಿಗೆ 25 ಸಾವಿರ ರೂ. ಕೊಟ್ಟ ಚುರುಮುರಿ ವ್ಯಾಪಾರಿ!

- Advertisement -
- Advertisement -

ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಚುರುಮುರಿ ವ್ಯಾಪಾರಿಯೊಬ್ಬರು 25 ಸಾವಿರ ರೂಪಾಯಿ ಠೇವಣಿ ನೀಡಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ತೇಗೂರು ಸರ್ಕಲ್ ನಲ್ಲಿ ಚುರುಮುರಿ ಅಂಗಡಿ ನಡೆಸುತ್ತಿರುವ ವ್ಯಾಪಾರಿ ಲೋಕೇಶ್ ಬಾಬು ಚುನಾವಣಾ ಖರ್ಚಿಗೆಂದು ಹಣ ನೀಡಿ ಶುಭ ಹಾರೈಸಿದ್ದಾರೆ.ಇಂದು ಚಿಕ್ಕಮಗಳೂರು ತಾಲೂಕಿನಲ್ಲಿ ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ವೇಳೆ
ತಾಂಬೂಲದ ಜೊತೆ ಹಣ ನೀಡಿದ್ದಾರೆ.

ಇಂದು ಚಿಕ್ಕಮಗಳೂರು ನಗರದ ವಿವಿಧ ಸ್ಥಳಗಳಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪ್ರಚಾರ ನಡೆಸುತ್ತಿದ್ದಾರೆ.ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತು ಸ್ಥಳೀಯ ಬಿಜೆಪಿ ಮುಖಂಡರು ಕೂಡಾ ಈ ಸಂಧರ್ಬದಲ್ಲಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!