Friday, June 27, 2025
Homeತಾಜಾ ಸುದ್ದಿಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ : ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಸಿಐಡಿ...

ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ : ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಸಿಐಡಿ ‌ನೋಟೀಸ್

spot_img
- Advertisement -
- Advertisement -

ಬೆಂಗಳೂರು: ಪಿಎಸ್ ಐ ಪರೀಕ್ಷೆ ಅಕ್ರಮ ಸಂಬಂಧ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಸಿಐಡಿ ನೋಟೀಸ್ ನೀಡಿದೆ. ಪ್ರಿಯಾಂಕ್ ಖರ್ಗೆ ಅವರ ಬೆಂಗಳೂರಿನ ನಿವಾಸಕ್ಕೆ ಸಿಐಡಿ ಪೊಲೀಸರು ತೆರಳಿ ನೋಟೀಸ್ ನೀಡಿದ್ದಾರೆ.

ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಶಾಸಕರಾಗಿರುವ ಪ್ರಿಯಾಂಕ್ ಖರ್ಗೆ ಏಪ್ರಿಲ್ 23 ರಂದು ಸುದ್ದಿ ಗೋಷ್ಟಿ ನಡೆಸಿ ತಮ್ಮ ಬಳಿ ಪರೀಕ್ಷೆ ಅಕ್ರಮ ಸಂಬಂಧ ಸಾಕ್ಷ್ಯಗಳಿರುವುದಾಗಿ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ತಮ್ಮ ಬಳಿ ಇರುವ ಸಾಕ್ಷ್ಯಗಳ ಸಮೇತ ನಾಳೆ ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಸಿಐಡಿ ಸೂಚಿಸಿದೆ.

ಇತ್ತ ಸಿಐಡಿ ವಿಚಾರಣೆಗೆ ಹಾಜರಾಗುವ ಬಗ್ಗೆ ಪಕ್ಷದ ತೀರ್ಮಾನದಂತೆ ನಡೆದುಕೊಳ್ಳುವುದಾಗಿ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

- Advertisement -
spot_img

Latest News

error: Content is protected !!