Thursday, April 25, 2024
Homeಕರಾವಳಿಜುಲೈ 1ರಂದು ರಸ್ತೆಗೆ ಇಳಿಯಲಿದೆ ಖಾಸಗಿ ಬಸ್...!!

ಜುಲೈ 1ರಂದು ರಸ್ತೆಗೆ ಇಳಿಯಲಿದೆ ಖಾಸಗಿ ಬಸ್…!!

spot_img
- Advertisement -
- Advertisement -

ಮಂಗಳೂರು ಜೂನ್ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 1 ರಿಂದ ಸಿಟಿಬಸ್ ಸಂಚಾರ ಆರಂಭಿಸಲಿದೆ ಎಂದು ಕೆನರಾ ಬಸ್ ಮಾಲಕರ ಅಸೋಸಿಯೇಶನ್ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಮತ್ತು ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ತಿಳಿಸಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬುಧವಾರದಿಂದ ಲಾಕ್ ಡೌನ್ ನ ನಿರ್ಬಂಧದಲ್ಲಿ ಸಡಿಲಿಕೆ ಮಾಡಲಾಗಿದ್ದು, ಶೇಕಡ 50 ರಷ್ಟು ಪ್ರಯಾಣಿಕರು ಬಸ್ ನಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಜಿಲ್ಲೆಯಲ್ಲಿ ಯಾವುದೇ ಖಾಸಗಿ ಬಸ್ ರಸ್ತೆಗಿಳಿದಿರಲಿಲ್ಲ. ಬುಧವಾರದಿಂದ 7 ದಿನ ಬಸ್ ಓಡಿಸಿದರೆ, 1 ತಿಂಗಳ ತೆರಿಗೆ ಕಟ್ಟಬೇಕು. ಇದು ಕಷ್ಟ ಸಾಧ್ಯ. ಈಗಿನ ಡೀಸೆಲ್ ಬೆಲೆಯಲ್ಲಿ ಶೇ 50 ರಷ್ಟು ಪ್ರಯಾಣಿಕರನ್ನು ಕರೆದೊಯ್ಯುವುದು ನಷ್ಟ ಉಂಟಾಗಲಿದೆ. ಅಲ್ಲದೇ ನಗರದಾದ್ಯಂತ ಕಾಮಗಾರಿಗಾಗಿ ರಸ್ತೆ ಅಗೆದು ಹಾಕಲಾಗಿದೆ. 2 ತಿಂಗಳಿನಿಂದ ನಿಂತಿದ್ದ ಬಸ್‌ಗಳನ್ನು ಗ್ಯಾರೇಜ್‌ಗೆ ತೆಗೆದುಕೊಂಡು ಹೋಗಿ ದುರಸ್ತಿ ಮಾಡಿಸಬೇಕಿದೆ ಎಂದು ಬಸ್‌ ಮಾಲೀಕರು ತಿಳಿಸಿದ್ದಾರೆ.ಆದಾಗ್ಯೂ ಪರಿಸ್ಥಿತಿಯನ್ನು ಗಮನಿಸಿ ಜುಲೈ 1 ರಿಂದ ಸಿಟಿ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಬಸ್ ಮಾಲಕರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!