- Advertisement -
- Advertisement -
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಚುನಾವಣೆ ಇಂದು ನಡೆಯಿತು.
ತೆರಿಗೆ ನಿರ್ಧರಣೆ ಹಣಕಾಸು ಮತ್ತು ಅಪೀಲು ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕದ್ರಿ ಮನೋಹರ್ ಶೆಟ್ಟಿ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಸುಮಿತ್ರ ಕರಿಯ ಆಯ್ಕೆಯಾಗಿದ್ದಾರೆ.
ಲೆಕ್ಕಪತ್ರ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಸರಿತಾ ಶಶಿಧರ್ ಹಾಗೂ ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ವೀಣಾ ಮಂಗಳ ಆಯ್ಕೆಯಾಗಿದ್ದಾರೆ.
ಮಹಾನಗರ ಪಾಲಿಕೆ ಕಚೇರಿಯಲ್ಲಿ ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ಚುನಾವಣೆ ವೇಳೆ ಮಂಗಳೂರು ಶಾಸಕ ಡಾ. ವೈ. ಭರತ್ ಶೆಟ್ಟಿ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
- Advertisement -