Sunday, June 29, 2025
Homeತಾಜಾ ಸುದ್ದಿಜುಲೈ 1ರಿಂದ ಪೌರ ಕಾರ್ಮಿಕರ ಮುಷ್ಕರ; ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹ

ಜುಲೈ 1ರಿಂದ ಪೌರ ಕಾರ್ಮಿಕರ ಮುಷ್ಕರ; ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹ

spot_img
- Advertisement -
- Advertisement -

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಸಫಾಯಿ ಕರ್ಮಚಾರಿ, ಪೌರ ಕಾರ್ಮಿಕರ ಸಂಘ ಹಾಗೂ ಕ್ರಿಯಾ ಸಮಿತಿಯು ಜುಲೈ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.

ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 18 ಸಾವಿರಕ್ಕೂ ಹೆಚ್ಚು ಪೌರ ಕಾರ್ಮಿಕರು ಬೆಂಗಳೂರು ಸ್ವಾತಂತ್ಯ್ರ ಉದ್ಯಾನವನದಲ್ಲಿ ಅನಿರ್ದಿಷ್ಟಾವಧಿಯವರೆಗೆ ಪ್ರತಿಭಟನೆ ನಡೆಸುತ್ತಾರೆ. ನೇರ ಪಾವತಿ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಬೇಕೆಂದು ಒತ್ತಾಯಿಸಿ, ಜುಲೈ 1ರಿಂದ ಬಿಬಿಎಂಪಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರು ಮುಷ್ಕರ ನಡೆಸಲಿದ್ದಾರೆ ಎಂದು ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ನಾರಾಯಣ ಹೇಳಿದರು.

“ಪೌರ ಕಾರ್ಮಿಕರು ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿಯೂ ಜುಲೈ 1ರಿಂದ ಕಾರ್ಯ ನಿರ್ವಹಿಸದೇ ಪ್ರತಿಭಟನೆ ನಡೆಸಲಿದ್ದು, ಪ್ರತಿಭಟನೆಗೆ ಕಾರಣ ಪೌರ ಕಾರ್ಮಿಕರಿಗೆ ಆರೋಗ್ಯ, ಕುಡಿಯುವ ನೀರು, ಹೆರಿಗೆ ರಜೆ ಹಾಗೂ ವಿಶ್ರಾಂತಿ ಕೊಠಡಿ ಸೇರಿದಂತೆ ಯಾವುದೇ ಸೌಲಭ್ಯಗಳೂ ಸಿಗುತ್ತಿಲ್ಲ ಎಂದು ನಾರಾಯಣ ಆರೋಪಿಸಿದ್ದಾರೆ.

ಈ ಕುರಿತು ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಯಾವ ಅಧಿಕಾರಿಯೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಪೌರ ಕಾರ್ಮಿಕರನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಅವರು ಹತಾಶೆ ಹೊರಹಾಕಿದ್ದಾರೆ. ಹಾಗಾಗಿ ಅನಿವಾರ್ಯವಾಗಿ ಕೆಲಸ ನಿಲ್ಲಿಸಿ ಮುಷ್ಕರ ಮಾಡುತ್ತೇವೆ ಎನ್ನುತ್ತಿದ್ದಾರೆ ಪೌರ ಕಾರ್ಮಿಕರು.

- Advertisement -
spot_img

Latest News

error: Content is protected !!