Saturday, October 17, 2026
Homeಪ್ರಮುಖ-ಸುದ್ದಿತಿರಂಗ ಯಾತ್ರೆಗೂ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಪೊಲೀಸ್ ವಶಕ್ಕೆ; ಪೊಲೀಸ್ ವಾಹನ ತಡೆಯಲು...

ತಿರಂಗ ಯಾತ್ರೆಗೂ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಪೊಲೀಸ್ ವಶಕ್ಕೆ; ಪೊಲೀಸ್ ವಾಹನ ತಡೆಯಲು ಪ್ರತಿಭಟನಾಕಾರರ ಯತ್ನ

- Advertisement -
- Advertisement -

ಹೊಸದಿಲ್ಲಿ: ಕಾಕ್ರೋಚ್ ಜನತಾ ಪಾರ್ಟಿಯ ತಿರಂಗ ಯಾತ್ರೆಗೂ ಮುನ್ನ ಸಂಘಟನೆಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ದಿಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಅವರನ್ನು ವಾಹನದಲ್ಲಿ ಕರೆದೊಯ್ಯುತ್ತಿದ್ದ ವೇಳೆ ಪ್ರತಿಭಟನಾಕಾರರು ವಾಹನ ತಡೆಯಲು ಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸರ ಕ್ರಮವನ್ನು ಪ್ರಶ್ನಿಸಿದ ದೀಪ್ಕೆ, ತಾನು ಯಾವುದೇ ಕಾನೂನು ಉಲ್ಲಂಘಿಸಿಲ್ಲ. ಯಾವ ಕಾನೂನಿನಡಿ ವಶಕ್ಕೆ ಪಡೆಯಲಾಗುತ್ತಿದೆ ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸರು, ಮುಂಜಾಗ್ರತಾ ಕ್ರಮವಾಗಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!