Thursday, June 4, 2026
Homeತಾಜಾ ಸುದ್ದಿಎಸ್.ಎಸ್.ಎಲ್.ಸಿ, ದ್ವಿತೀಯ ಪಿಯು‌ ಎಕ್ಸಾಂ ರದ್ದು ವದಂತಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು?

ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯು‌ ಎಕ್ಸಾಂ ರದ್ದು ವದಂತಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು?

- Advertisement -
- Advertisement -

ಬೆಂಗಳೂರು : ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಲಾಗುತ್ತೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಎಸ್.ಎಸ್.ಎಲ್.ಸಿ-ದ್ವಿತೀಯ ಪಿಯು‌ ಪರೀಕ್ಷೆಗಳನ್ನು ರದ್ದು ‌ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು  ಅವರು ಹೇಳಿದ್ದಾರೆ.

ಕೆಲವು ಮಾಧ್ಯಮಗಳ ಸುದ್ದಿ ಊಹಾಪೋಹವಷ್ಟೇ‌ ಎಂದಿರುವ ಸಚಿವರು ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ವಿಚಲಿತರಾಗದೇ‌ ವಿದ್ಯಾರ್ಥಿಗಳು‌ ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!