Tuesday, May 7, 2024
Homeಕೊಡಗುಕೊಡಗಿನ ಸಾಯಿ ಶಂಕರ ಶಾಲೆಯಲ್ಲಿ ಶಸ್ತ್ರಾಸ್ತ್ರ ತರಬೇತಿ ವಿಚಾರ: ಯಾವುದೇ ರೀತಿಯ ಟ್ರೈನಿಂಗ್ ನಡೆದಿಲ್ಲ ಎಂದು...

ಕೊಡಗಿನ ಸಾಯಿ ಶಂಕರ ಶಾಲೆಯಲ್ಲಿ ಶಸ್ತ್ರಾಸ್ತ್ರ ತರಬೇತಿ ವಿಚಾರ: ಯಾವುದೇ ರೀತಿಯ ಟ್ರೈನಿಂಗ್ ನಡೆದಿಲ್ಲ ಎಂದು ಶಾಲಾ ಆಡಳಿತ ಮಂಡಳಿಯಿಂದ ಸ್ಪಷ್ಟನೆ

spot_img
- Advertisement -
- Advertisement -

ಕೊಡಗು: ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲೆಯಲ್ಲಿ ಭಜರಂಗದಳದಿಂದ ನೂರಾರು ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಲಾಗಿದೆ ಎಂಬ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಶಾಲಾ ಆಡಳಿತ ಮಂಡಳಿ ಈ ಬಗ್ಗೆ ಸ್ಪಷ್ಟನೆ ನೀಡಿದೆ.

ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಸಾಯಿ ಶಂಕರ ವಿದ್ಯಾಸಂಸ್ಥೆಯ ಆವರಣದಲ್ಲಿ ಯಾವುದೇ ರೀತಿಯ ಶಸ್ತ್ರಾಸ್ತ್ರ ತರಬೇತಿ ನಡೆದಿಲ್ಲ ಎಂದು ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಹೇಳಿದೆ. ಕೆಲವರು ರಾಜಕೀಯ ಲಾಭಕ್ಕಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಝರು ಗಣಪತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು , “ಬೇಸಿಗೆ ರಜೆ ಇದ್ದ ಕಾರಣ ವಿದ್ಯಾಸಂಸ್ಥೆಯಲ್ಲಿ ಕಾರ್ಯಕ್ರಮಕ್ಕೆ ಸ್ಥಳಾವಕಾಶ ನೀಡಲಾಗಿತ್ತು. ಆದರೆ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಅಥವಾ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಮುಕ್ತ ಅವಕಾಶ “ಸಂಸ್ಥೆಯ ಸಭಾಂಗಣದಲ್ಲಿ ಊಟ ಮತ್ತು ಮಲಗುವ ವ್ಯವಸ್ಥೆಗೆ ಅವಕಾಶ ಕಲ್ಪಿಸಲಾಗಿತ್ತು. ಈ ಹಿಂದೆಯೂ ಜಾತಿ, ಧರ್ಮದ ತಾರತಮ್ಯವಿಲ್ಲದೆ ಹಲವು ಕಾರ್ಯಕ್ರಮಗಳಿಗೆ ಮುಕ್ತ ಅವಕಾಶ ನೀಡಲಾಗಿದೆ” ಎಂದು ಝರು ಗಣಪತಿ ಹೇಳಿದರು.

“ಸಭಾ ಕಾರ್ಯಕ್ರಮ ಹೊರತುಪಡಿಸಿ ಇತರ ಚಟುವಟಿಕೆಗಳನ್ನು ಸಂಸ್ಥೆಯ ಹೊರ ಭಾಗದಲ್ಲಿ ನಡೆಸಲಾಗಿದ್ದು, ಶಾಲೆ ಆವರಣದ ಸಂಪೂರ್ಣ ಮಾಹಿತಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾನೂನು ಬಾಹಿರ ಚಟುವಟಿಕೆಗಳು ಇಲ್ಲಿ ನಡೆದಿಲ್ಲ” ಎಂದಿದ್ದಾರೆ.

- Advertisement -
spot_img

Latest News

error: Content is protected !!