Friday, June 5, 2026
Homeಕರಾವಳಿಮಂಗಳೂರು: ಅಪಘಾತ ವಿಚಾರಕ್ಕೆ ಸಂಬಂಧಿಸಿ ಎರಡು ತಂಡಗಳ ನಡುವೆ ವಾಗ್ವಾದ;ಪೊಲೀಸರಿಂದ ಲಘು ಲಾಠಿ...

ಮಂಗಳೂರು: ಅಪಘಾತ ವಿಚಾರಕ್ಕೆ ಸಂಬಂಧಿಸಿ ಎರಡು ತಂಡಗಳ ನಡುವೆ ವಾಗ್ವಾದ;ಪೊಲೀಸರಿಂದ ಲಘು ಲಾಠಿ ಪ್ರಹಾರ!

- Advertisement -
- Advertisement -

ಮಂಗಳೂರು: ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಎರಡೂ ತಂಡಗಳ ನಡುವೆ ಗುರುವಾರ ರಾತ್ರಿ ವಾಗ್ವಾದ ನಡೆದಿದ್ದು,ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಗುಂಪು ಚದುರಿಸಿದ ಘಟನೆ ಕಾವೂರಿನಲ್ಲಿ ನಡೆದಿದೆ.

ನಗರದ ಕಾವೂರು ಜಂಕ್ಷನ್ ಸಮೀಪದ‌ ದೈವಸ್ಥಾನವೊಂದರ ಬಳಿ ಕಾರು ಹಾಗೂ ಸ್ಕೂಟರ್ ನಡುವೆ ಗುರುವಾರ ಸಂಜೆ ವೇಳೆ ಅಪಘಾತ ಸಂಭವಿಸಿದ್ದು, ಈ ಮಧ್ಯೆ, ಎರಡೂ ತಂಡಗಳ‌ ನಡುವೆ ಮಾತಿನ‌ ಚಕಮಕಿ ಏರ್ಪಟ್ಟು, ತೀವ್ರ ವಾಗ್ವಾದಕ್ಕೆ ಕಾರಣವಾಗಿತ್ತು.



ವಾಗ್ವಾದಗಳು ಜಾಸ್ತಿಯಾಗುತ್ತಿದ್ದಂತೆ ಎರಡೂ ಗುಂಪುಗಳು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದು, ಇದರಿಂದ ಗುಂಪುಗೂಡಿದ್ದ ತಂಡಗಳು ಚದುರಿದವು. ಎರಡೂ ತಂಡಗಳ ಯುವಕರು ಕಾವೂರು ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಿಸಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!