Thursday, June 25, 2026
Homeಉತ್ತರ ಕನ್ನಡಶಾಲಾ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿದು ವಿದ್ಯಾರ್ಥಿಗಳಿಗೆ ಗಾಯ

ಶಾಲಾ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿದು ವಿದ್ಯಾರ್ಥಿಗಳಿಗೆ ಗಾಯ

- Advertisement -
- Advertisement -

ಕಾರವಾರ: ಶಾಲಾ ಕಟ್ಟಡದ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿದು ಐದು ಜನ ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ನಗರದಲ್ಲಿ ನಡೆದಿದೆ.

ಅಂಕೋಲ ನಗರದ ನಿರ್ಮಲ ಕಾನ್ವೆಂಟ್ ಶಾಲೆಯಲ್ಲಿ ಘಟನೆ ಸಂಭವಿಸಿದ್ದು, ನಾಲ್ಕನೇ ತರಗತಿ ಕೊಠಡಿಯ ಮೇಲ್ಛಾವಣಿಯ ಪ್ಲಾಸ್ಟರಿಂಗ್ ಕುಸಿದಿದೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Latest News

error: Content is protected !!