Wednesday, June 24, 2026
Homeಕರಾವಳಿಪಾದೇಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್(ರಿ)ನ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ

ಪಾದೇಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್(ರಿ)ನ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ

- Advertisement -
- Advertisement -

ಮಂಗಳೂರು: ಇಲ್ಲಿನ ತಣ್ಣೀರುಬಾವಿ ಕಡಲತೀರದಲ್ಲಿ ನವೆಂಬರ್ 21 ರಂದು ಪಾದೇಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್(ರಿ)ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪ್ರೌಢ, ಪದವಿ ಪೂರ್ವ ಹಾಗೂ ಪದವಿ ವಿಭಾಗದ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಸ್ವಿಮ್ಮಿಂಗ್ ಅಸೋಸಿಯೇಷನ್ ನ ಅಧ್ಯಕ್ಷ ಯತೀಶ್ ರೈ, ಪ್ರಾಣಿ ರಕ್ಷಣಾ ಮತ್ತು ಆಹಾರ ಕೇಂದ್ರದ ರಜನಿ ಹಾಗೂ ದಾಮೋದರ ಶೆಟ್ಟಿ, ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಮುಖ್ಯಸ್ಥರಾದ ಬಬಿತಾ ಆರ್. ನಾಥ್, ಕಾರ್ಯದರ್ಶಿಗಳಾದ ಶಿವಾಣಿ ಆರ್. ನಾಥ್, ಟ್ರಸ್ಟಿಗಳಾದ ಜಯನಿ ಆರ್ ನಾಥ್, ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ್ ಜಿ. ನಾಯಕ್, ಪದವಿ ವಿಭಾಗ ಮುಖ್ಯಸ್ಥರಾದ ದೀಕ್ಷಿತಾ, ಪದವಿ ಪೂರ್ವ ವಿಭಾಗದ ಮುಖ್ಯಸ್ಥರಾದ ಸೌಮ್ಯಾ ಎನ್ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ಅತಿಥಿಗಳು ಸೇರಿ ಕಡಲ ತೀರವನ್ನ ಸ್ವಚ್ಛಗೊಳಿಸಿದರು. ಈ ನಿಟ್ಟಿನಲ್ಲಿ ಕಸ ಸಂಗ್ರಹ, ಪ್ಲಾಸ್ಟಿಕ್ ನಿವಾರಣೆ ಹಾಗೂ ತ್ಯಾಜ್ಯ ವಿಭಜನೆ ಕುರಿತು ಜಾಗೃತಿ ಮೂಡಿಸಲಾಯಿತು.

- Advertisement -

Latest News

error: Content is protected !!