Wednesday, June 24, 2026
Homeಕರಾವಳಿಉಡುಪಿಉಡುಪಿ:ಮೂಡುಬೆಟ್ಟುವಿನಲ್ಲಿ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟ: ಇಬ್ಬರಿಗೆ ಗಾಯ

ಉಡುಪಿ:ಮೂಡುಬೆಟ್ಟುವಿನಲ್ಲಿ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟ: ಇಬ್ಬರಿಗೆ ಗಾಯ

- Advertisement -
- Advertisement -

ಉಡುಪಿ: ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟವಾಗಿ ಇಬ್ಬರಿಗೆ ಗಾಯಗಳಾಗಿರುವ ಘಟನೆ ಉಡುಪಿಯ ಮೂಡುಬೆಟ್ಟುವಿನಲ್ಲಿ ನಡೆದಿದೆ.

ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ಪೀಠೋಪಕರಣಗಳು ಸುಟ್ಟು ಹೋಗಿವೆ. ಕಿಟಕಿಯ ಗಾಜುಗಳು ಒಡೆದು ಹೋಗಿದ್ದು, ಅಡುಗೆ ಕೋಣೆಯ ಪಾತ್ರೆ, ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿವೆ‌.

ಅಡುಗೆ ಕೋಣೆಯಲ್ಲಿದ್ದ ಸಿಲಿಂಡರ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಕೋಣೆಗೆ ವ್ಯಾಪಿಸಿದೆ. ಅವಘಡ ಸಂಭವಿಸುತ್ತಿದ್ದಂತೆ ಮನೆಯೊಳಗಿದ್ದವರು ಹೊರಗೆ ಓಡಿ ಬಂದಿದ್ದಾರೆ. ಈ ಪೈಕಿ ಸಾವಿತ್ರಿ ಹಾಗೂ ಇನ್ನೊಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಸಮಾಜ ಸೇವಕ ಈಶ್ವರ್ ಮಲ್ಪೆ ಹಾಗೂ ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ.

- Advertisement -

Latest News

error: Content is protected !!