Sunday, June 7, 2026
Homeಕರಾವಳಿಉಡುಪಿಉಡುಪಿಯಲ್ಲಿ ಕರ್ನಾಟಕ ಕ್ರೀಡಾಕೂಟ ಸಮರೋಪ; ಮುಖ್ಯ‌ ಅತಿಥಿಯಾಗಿ ರಾಜ್ಯಪಾಲ ಗೆಹ್ಲೋಟ್ ಭಾಗಿ

ಉಡುಪಿಯಲ್ಲಿ ಕರ್ನಾಟಕ ಕ್ರೀಡಾಕೂಟ ಸಮರೋಪ; ಮುಖ್ಯ‌ ಅತಿಥಿಯಾಗಿ ರಾಜ್ಯಪಾಲ ಗೆಹ್ಲೋಟ್ ಭಾಗಿ

- Advertisement -
- Advertisement -

ಉಡುಪಿ: ಕರ್ನಾಟಕ ಕ್ರೀಡಾಕೂಟ-2025ರ ಸಮಾರೋಪ ಸಮಾರಂಭ ಉಡುಪಿಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಿದ್ದರು.

ಸಮಾರೋಪ ಭಾಷಣ ಮಾಡಿದ ರಾಜ್ಯಪಾಲರು, ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ತಂಡದ ಕೆಲಸ ಮತ್ತು ಸಹಕಾರದ ಭಾವನೆ ಹೆಚ್ಚಾಗುತ್ತದೆ ಮತ್ತು ಏಕತೆ, ಶಿಸ್ತು ಮತ್ತು ಸಮಾನತೆಯಂತಹ ಗುಣಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದು ಹೇಳಿದರು.

ಅಲ್ಲದೇ, ಕರ್ನಾಟಕ ಸರ್ಕಾರವು ವಿವಿಧ ಯೋಜನೆಗಳ ಮೂಲಕ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸುತ್ತಿದೆ. ಕರ್ನಾಟಕ ರಾಜ್ಯವು ಅನೇಕ ಶ್ರೇಷ್ಠ ಆಟಗಾರರನ್ನು ಹುಟ್ಟು ಹಾಕಿದೆ. ಜಾಗತಿಕ ಮಟ್ಟದಲ್ಲಿ ರಾಜ್ಯ ಮತ್ತು ದೇಶಕ್ಕೆ ಕೀರ್ತಿ ತಂದವರು. ಆ ಆಟಗಾರರಿಂದ ಸ್ಫೂರ್ತಿ ಪಡೆದು ಮುನ್ನಡೆಯಬೇಕು ಎಂದು ರಾಜ್ಯಪಾಲರು ಕರೆ ನೀಡಿದರು.

ಸಮಾರಂಭದಲ್ಲಿ ಗೃಹ ಸಚಿವ ಡಾ.‌ ಜಿ. ಪರಮೇಶ್ವರ್ ಮತ್ತು ವಿಧಾನ ಪರಿಷತ್ ಸದಸ್ಯ ಹಾಗೂ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ. ಗೋವಿಂದರಾಜ್ ಉಪಸ್ಥಿತರಿದ್ದರು.

ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ರಾಜ್ಯ ಕ್ರೀಡಾಕೂಟವನ್ನು ಆಯೋಜಿಸಿತ್ತು.

- Advertisement -

Latest News

error: Content is protected !!