Friday, June 27, 2025
Homeಕರಾವಳಿಮಂಗಳೂರುಬೆಳ್ತಂಗಡಿ; 32ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

ಬೆಳ್ತಂಗಡಿ; 32ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

spot_img
- Advertisement -
- Advertisement -

ಬೆಳ್ತಂಗಡಿ; ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 32ನೇ ಟೈಲರಿಂಗ್‌ ತರಬೇತಿ ಶಿಬಿರದ ಸಮಾರೋಪ ಸಮಾರಂಭವು  ಜೂನ್ 1 ರಂದು ನೇಲ್ಯಡ್ಕದಲ್ಲಿ ನಡೆಯಿತು.

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಪ್ರತಿಮಾ ಮಾತನಾಡಿ ಜನರಿಗೆ ಸ್ವ ಉದ್ಯೋಗ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟರುವುದು ಬಹಳ ಸಂತೋಷದ ವಿಷಯ ಕಲಿತಂತ ವಿದ್ಯೆಯನ್ನು ಅರ್ಧಕ್ಕೆ ಕೈ ಬಿಡದೆ ಮುಂದುವರಿಸಿಕೊಂಡು ಹೋಗಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷೆ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ ಇದರ ಸಿಇಒ ಶ್ರೀಮತಿ ಸ್ವರ್ಣಗೌರಿ ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ – ಉದ್ಯೋಗದ ಅವಕಾಶವಿರುತ್ತದೆ. ಕಲಿತ ವಿದ್ಯೆ ಎಂದಿಗೂ ನಮಗೆ ಶಾಶ್ವತ ಮಹಿಳೆಯರು ಯಾವತ್ತಿಗೂ ಇನ್ನೊಬ್ಬರಿಗೆ ಅವಲಂಬಿತವಾಗದೆ ಸ್ವಾವಲಂಬಿ ಜೀವನವನ್ನು ನಡೆಸುವುದು ಅತ್ಯಗತ್ಯವೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರರಾದ ಶ್ರೀಮತಿ ಹರಿಣಾಕ್ಷಿ ಬಿ.ಪಿ ಎಲ್ಲರಿಗೂ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು.  ನಮ್ಮ ಸಂಸ್ಥೆಯ ಪರವಾಗಿ ಇವರನ್ನು  ಸನ್ಮಾನಿಸಿ ಗೌರವಿಸಲಾಯಿತು. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಅರಸಿನಮಕ್ಕಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ನವೀನ ರೆಖ್ಯಾ, ಅರಸಿನಮಕ್ಕಿ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾದ ಶ್ರೀಮತಿ ನೀತಾ ರಾಧೇಶ್ ಆಚಾರ್ಯ, ರೆಖ್ಯಾ ಮಾಜಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮಾಲತಿ, ಸ್ಥಳೀಯ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಹೇಮಲತಾ ಮತ್ತು ಕುಮಾರಿ ಅಮಿತ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು  34 ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಶ್ರೀಮತಿ ಹೇಮಲತಾ ಸ್ವಾಗತಿಸಿ, ಡಾಕ್ಯುಮೆಂಟೇಶನ್, ಮಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಕಾರ್ಯಕ್ರಮ ನಿರೂಪಿಸಿ,  ಶ್ರೀಮತಿ ಸ್ವಾತಿ ಧನ್ಯವಾದವಿತ್ತರು.

- Advertisement -
spot_img

Latest News

error: Content is protected !!