Wednesday, June 24, 2026
Homeತಾಜಾ ಸುದ್ದಿನಿಗಮ-ಮಂಡಳಿ ಅಧ್ಯಕ್ಷರ ನೇಮಕಾತಿ ವಿಚಾರವಾಗಿ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಜೊತೆ ಸಿಎಂ, ಡಿಸಿಎಂ ಸಭೆ

ನಿಗಮ-ಮಂಡಳಿ ಅಧ್ಯಕ್ಷರ ನೇಮಕಾತಿ ವಿಚಾರವಾಗಿ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಜೊತೆ ಸಿಎಂ, ಡಿಸಿಎಂ ಸಭೆ

- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಬಾಕಿ ಉಳಿದಿರುವ ನಿಗಮ ಮತ್ತು ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ವಿಚಾರವಾಗಿ ಬೆಂಗಳೂರಿನಲ್ಲಿ ಇಂದು ಮಹತ್ವದ ಸಭೆ ನಡೆದಿದೆ.

ಬೆಂಗಳೂರಿನ‌ ಖಾಸಗಿ ಹೊಟೇಲ್ ನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ಧರಾಮಯ್ಯ,‌ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪಾಲ್ಗೊಂಡಿದ್ದರು.

ನೇಮಕಾತಿ ಸಂಬಂಧ ಇತ್ತೀಚೆಗೆ ನವದೆಹಲಿಯಲ್ಲಿ ನಡೆದಿದ್ದ ಚರ್ಚೆ ಅಪೂರ್ಣವಾಗಿದ್ದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಚರ್ಚೆ ಮುಂದುವರಿದಿದೆ.

ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಇರುವ ರಣದೀಪ್ ಸಿಂಗ್ ಸುರ್ಜೇವಾಲಾ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ.

- Advertisement -

Latest News

error: Content is protected !!