Wednesday, June 24, 2026
Homeಕರಾವಳಿಸಿಎಂ-ಡಿಸಿಎಂ ಬೆಂಬಲಿಗರ ಮೇಲಾಟಕ್ಕೆ ಸಾಕ್ಷಿಯಾದ ಮಂಗಳೂರು ಏರ್ ಪೋರ್ಟ್

ಸಿಎಂ-ಡಿಸಿಎಂ ಬೆಂಬಲಿಗರ ಮೇಲಾಟಕ್ಕೆ ಸಾಕ್ಷಿಯಾದ ಮಂಗಳೂರು ಏರ್ ಪೋರ್ಟ್

- Advertisement -
- Advertisement -

ಮಂಗಳೂರು: ರಾಜ್ಯದಲ್ಲಿ ಅಧಿಕಾರ ಹಸ್ತಾಂತರ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಬಲಿಗರ ಮೇಲಾಟಕ್ಕೆ ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಾಕ್ಷಿಯಾಯಿತು.

ಕೊಣಾಜೆಯಲ್ಲಿ ನಡೆದ ನಾರಾಯಣಗುರು-ಮಹಾತ್ಮಾ ಗಾಂಧಿ ಐತಿಹಾಸಿಕ ಸಂವಾದದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಏರ್ ಪೋರ್ಟ್ ಗೆ ಬಂದ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಡಿಕೆ ಎಂದು ಘೋಷಣೆ ಕೂಗಿ ಸ್ವಾಗತ ಮಾಡಿದರು.

ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಏರ್ ಪೋರ್ಟ್ ಗೆ ಬಂದಿಳಿದ ವೇಳೆ ಸಿದ್ದರಾಮಯ್ಯ ಬೆಂಬಲಿಗರು ಸಿದ್ಧರಾಮಯ್ಯ ಪೂರ್ಣಾವಧಿ ಸಿಎಂ ಎಂದು ಘೋಷಣೆ ಕೂಗಿ ಸ್ವಾಗತಿಸಿದರು.

ಸಿಎಂ ಆಗಮನದ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಚಿವರುಗಳಾದ ಸತೀಶ್ ಜಾರಿಕಿಹೊಳಿ, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್ ಖಾನ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಸಿದ್ದರಾಮಯ್ಯ ಜೊತೆಗಿದ್ದರು.

ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಗಂಗೋತ್ರಿ ಕ್ಯಾಂಪಸ್ ನಲ್ಲಿ ನಡೆದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆಹ್ವಾನ ಇರಲಿಲ್ಲ.

- Advertisement -

Latest News

error: Content is protected !!