Wednesday, May 1, 2024
Homeಕರಾವಳಿರಬ್ಬರ್ ಪ್ಲಾಂಟೇಶನ್ ಟ್ಯಾಪರ್ ಗಳಿಗೆ  ಶೇ. 12  ರಷ್ಟು ಬೋನಸ್  ಹೆಚ್ಚಳ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ರಬ್ಬರ್ ಪ್ಲಾಂಟೇಶನ್ ಟ್ಯಾಪರ್ ಗಳಿಗೆ  ಶೇ. 12  ರಷ್ಟು ಬೋನಸ್  ಹೆಚ್ಚಳ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

spot_img
- Advertisement -
- Advertisement -

ಮಂಗಳೂರು: ರಬ್ಬರ್ ಪ್ಲಾಂಟೇಶನ್ ಟ್ಯಾಪರ್ ಗಳಿಗೆ ಕೋವಿಡ್ ನಂತರ ಬೋನಸ್ ನೀಡದೇ ಇದ್ದು, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದಿಂದ ಈಗಿನ ಶೇಕಡಾ 8 ರಷ್ಟು ಬೋನಸ್ ಗೆ ಶೇಕಡಾ 12 ರಷ್ಟು ಬೋನಸ್ ಸೇರಿಸಿ ಒಟ್ಟು 20 ರಷ್ಟು ಬೋನಸ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿನ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಹಾಗೂ ಸಾರ್ವಜನಿಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ವೇಳೆ ಸಿಎಂ ಈ ಘೋಷಣೆ ಮಾಡಿದ್ದಾರೆ.

ಇದೇ ವೇಳೆ ಕಡಲ ಕೊರೆತ ನಿಯಂತ್ರಣಕ್ಕೆ ವೇವ್ ಬ್ರೇಕಿಂಗ್ ತಂತ್ರಜ್ಞಾನಕ್ಕೆ ಅನುಮತಿ ನೀಡಲಾಗಿದ್ದು, ಬಟ್ಟಂಪಾಡಿಯಲ್ಲಿ ಈ ಕೆಲಸ ಆಗಲಿದೆ ಎಂದು ಸಿಎಂ ಹೇಳಿದ್ದಾರೆ.

ಅಲ್ಲದೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,39,571 ರೈತರಿಗೆ ಕಿಸಾನ್ ಸಮ್ಮಾನ್ ಸೌಲಭ್ಯ ತಲುಪಿದ್ದು, 500 ಕೋಟಿ ರೂಪಾಯಿಗಳಿಗೂ ಹೆಚ್ಚು ಅನುದಾನ ದಕ್ಷಿಣ ಕನ್ನಡ ಜಿಲ್ಲೆಗೆ ತಲುಪಿದೆ ಎಂದು ಸಿಎಂ ತಿಳಿಸಿದ್ದಾರೆ. ‌

- Advertisement -
spot_img

Latest News

error: Content is protected !!