Tuesday, April 30, 2024
Homeಕರಾವಳಿರಾಯಣಗುರು ಅಧ್ಯಯನ ಪೀಠದ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ:ಬೆಂಗಳೂರಿನಲ್ಲಿ ಆರ್ಯ ಈಡಿಗ ಸಮಾವೇಶದಲ್ಲಿ ಸಿಎಂ...

ರಾಯಣಗುರು ಅಧ್ಯಯನ ಪೀಠದ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ:ಬೆಂಗಳೂರಿನಲ್ಲಿ ಆರ್ಯ ಈಡಿಗ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ

spot_img
- Advertisement -
- Advertisement -

ಬೆಂಗಳೂರು: ನಾರಾಯಣ ಗುರುಗಳ ಅಧ್ಯಯನ ಪೀಠ ಮತ್ತು ಕೋಟಿ ಚನ್ನಯ್ಯನವರ ಥೀಮ್ ಪಾರ್ಕಿಗೆ ನಮ್ಮ ಸರ್ಕಾರದಲ್ಲಿ ಹಿಂದೆ 5 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದ್ದು, ಈ ಪೈಕಿ ಅಧ್ಯಯನ ಪೀಠ ಮಾಡಲಾಗಿಲ್ಲ. ಅದರ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ನಡೆದ ಆರ್ಯ ಈಡಿಗ, ಬಿಲ್ಲವ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ
ಬೇಡಿಕೆಗಳ ಬಗ್ಗೆ ಸರ್ಕಾರ ಅಗತ್ಯ ಕ್ರಮ ವಹಿಸಲಿದೆ ಎಂದು ಹೇಳಿದ್ದಾರೆ.

ಹಿಂದುಳಿದ ಜಾತಿಗಳ ಸಂಘಟನೆ, ಶಿಕ್ಷಣ, ಹೋರಾಟದ ಬಗ್ಗೆ ಹಾಗೂ ಈಡಿಗ ಸಮಾಜಕ್ಕೆ ಏನು ಅಗತ್ಯ ಎಂದು ಪ್ರಸ್ತಾಪ ಮಾಡಿ ಅನೇಕ ಒತ್ತಾಯ ಬೇಡಿಕೆ ಗಳನ್ನು ಸಲ್ಲಿಸಿದ್ದಾರೆ. ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವುದರಿಂದ ಯಾವುದೇ ಭರವಸೆ ನೀಡಲಾಗುವುದಿಲ್ಲ. ಅಧಿವೇಶನ ಮುಗಿದ ಕೂಡಲೇ ಬಂದು ಕಂಡರೆ ಬೇಡಿಕೆಗಳ ಬಗ್ಗೆ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಭರವಸೆ ನೀಡಿದರು.

ನಾರಾಯಣ ಗುರುಗಳ ಜಯಂತಿಯನ್ನು ಸರ್ಕಾರ ಮಾಡಬೇಕೆಂದು ಒತ್ತಾಯ ಮಾಡಿದ್ದ ಹಿನ್ನೆಲೆಯಲ್ಲಿ ಅವರ ಜಯಂತಿಯನ್ನು ರಾಜ್ಯ ಸರ್ಕಾರವೇ ಆಚರಿಸುವಂತೆ ತೀರ್ಮಾನ ಮಾಡಲಾಯಿತು ಎಂದು‌ ಹೇಳಿದ ಸಿಎಂ, ನಾರಾಯಣ ಗುರುಗಳ ಅವರ ವಿಚಾರಗಳು ಇಂದಿಗೂ ಎಂದೆಂದಿಗೂ ಪ್ರಸ್ತುತ ಎಂದಿದ್ದಾರೆ.

ಸಮಾವೇಶದಲ್ಲಿ ಆರ್ಯ ಈಡಿಗ ಸಂಘದ ಅಧ್ಯಕ್ಷ ಡಾ.ಎಂ.ಬತಿಮ್ಮೆಗೌಡ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಮತ್ತು ಚಲನಚಿತ್ರನಟ ಶಿವರಾಜಕುಮಾರ್ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!